ADVERTISEMENT

ಜಾತಿಗಳ ಮಧ್ಯೆ ಕಲಹ ಸೃಷ್ಟಿಸುತ್ತಿರುವ ಸಿದ್ದರಾಮಯ್ಯ: ಜಗದೀಶ ಶೆಟ್ಟರ್ ಆರೋಪ

​ಪ್ರಜಾವಾಣಿ ವಾರ್ತೆ
Published 19 ಮಾರ್ಚ್ 2018, 10:34 IST
Last Updated 19 ಮಾರ್ಚ್ 2018, 10:34 IST
ಜಗದೀಶ ಶೆಟ್ಟರ್ (ಸಂಗ್ರಹ ಚಿತ್ರ)
ಜಗದೀಶ ಶೆಟ್ಟರ್ (ಸಂಗ್ರಹ ಚಿತ್ರ)   

ಹುಬ್ಬಳ್ಳಿ: ‘ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಾತಿ–ಜಾತಿಗಳ ಮಧ್ಯೆ ಕಲಹ ಸೃಷ್ಟಿಸುತ್ತಿದ್ದಾರೆ. ಜನರು ಅವರಿಗೆ ತಕ್ಕ ಪಾಠ ಕಲಿಸಲಿದ್ದಾರೆ’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಜಗದೀಶ ಶೆಟ್ಟರ್ ಹೇಳಿದರು.

ಪ್ರತ್ಯೇಕ ಲಿಂಗಾಯತ ಧರ್ಮಕ್ಕೆ ಮಾನ್ಯತೆ ನೀಡುವಂತೆ ಕೇಂದ್ರಕ್ಕೆ ಶಿಫಾರಸು ಮಾಡಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಂಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಸರ್ಕಾರದ ನಿರ್ಧಾರ ಸ್ಪಷ್ಟವಾಗಿಲ್ಲ ಎಂದರು.

‘ನ್ಯಾಯಮೂರ್ತಿ ನಾಗಮೋಹನ ದಾಸ್ ಸಮಿತಿ‌ ನೇಮಿಸಿದ್ದು ಅಲ್ಪಸಂಖ್ಯಾತ ಆಯೋಗದಿಂದ. ಅವರು ಲಿಂಗಾಯತರಿಗೆ ಅಲ್ಪಸಂಖ್ಯಾತ ಮಾನ್ಯತೆ ನೀಡುವ ಕುರಿತು ವರದಿ‌ ನೀಡಿದ್ದಾರೆ. ಆದರೆ, ಇದುವರೆಗೆ ಪ್ರತ್ಯೇಕ ಧರ್ಮ ಎನ್ನುತ್ತಿದ್ದವರು ಈಗ ಅಲ್ಪಸಂಖ್ಯಾತ ಸ್ಥಾನಮಾನಕ್ಕೆ ಶಿಫಾರಸು ಮಾಡಿದ್ದಾರೆ’ ಎಂದು ಶೆಟ್ಟರ್ ಹೇಳಿದರು.

ADVERTISEMENT

ಇನ್ನಷ್ಟು...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.