ADVERTISEMENT

ಜಾರಿ ನಿರ್ದೇಶನಾಲಯಕ್ಕೆ ಈಶ್ವರಪ್ಪ ವಿರುದ್ಧ ಮತ್ತೊಂದು ದೂರು

​ಪ್ರಜಾವಾಣಿ ವಾರ್ತೆ
Published 20 ಏಪ್ರಿಲ್ 2018, 19:30 IST
Last Updated 20 ಏಪ್ರಿಲ್ 2018, 19:30 IST

ಬೆಂಗಳೂರು: ಬಿಜೆಪಿ ಮುಖಂಡ ಕೆ.ಎಸ್‌. ಈಶ್ವರಪ್ಪ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಆರೋಪ ಪ್ರಕರಣವನ್ನು ಹೈಕೋರ್ಟ್‌ ವಿಚಾರಣೆಗೆ ಅಂಗೀಕರಿಸಿರುವುದರಿಂದ ಶಿವಮೊಗ್ಗ ವಕೀಲ ವಿನೋದ್‌ ಶುಕ್ರವಾರ ಜಾರಿ ನಿರ್ದೇಶನಾಲಯಕ್ಕೆ ಮತ್ತೊಂದು ದೂರು ನೀಡಿದ್ದಾರೆ.

ದೂರಿನ ಜೊತೆ ಪೂರಕ ದಾಖಲೆಗಳನ್ನು ಸಲ್ಲಿಸಿದ್ದಾರೆ. ಈಶ್ವರಪ್ಪನವರ ಹೊರ ರಾಜ್ಯ ಹಾಗೂ ಹೊರ ದೇಶಗಳಲ್ಲಿನ ವಹಿವಾಟು ಕುರಿತು ಸಮಗ್ರ ತನಿಖೆ ನಡೆಸುವಂತೆ ಇ.ಡಿ ಅಧಿಕಾರಿಗಳಿಗೆ ವಿನೋದ್‌ ಮನವಿ ಮಾಡಿದ್ದಾರೆ. ದೂರಿನ ಮೇಲೆ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಹಿರಿಯ ಅಧಿಕಾರಿಗಳು ಭರವಸೆ ನೀಡಿದ್ದಾರೆ ಎಂದು ಗೊತ್ತಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT