ADVERTISEMENT

ಜಿಲ್ಲಾಧಿಕಾರಿ ಕರ್ತವ್ಯಕ್ಕೆ ಅಡ್ಡಿ ಪ್ರಕರಣ; 2 ನೇ ಆರೋಪಿ ಬಂಧನ

​ಪ್ರಜಾವಾಣಿ ವಾರ್ತೆ
Published 24 ಜುಲೈ 2016, 20:07 IST
Last Updated 24 ಜುಲೈ 2016, 20:07 IST

ಮೈಸೂರು: ಜಿಲ್ಲಾಧಿಕಾರಿ ಸಿ.ಶಿಖಾ ಅವರ ಕರ್ತವ್ಯಕ್ಕೆ ಅಡ್ಡಿಪಡಿಸಿ, ನಿಂದಿಸಿದ ಪ್ರಕರಣದ ಎರಡನೇ ಆರೋಪಿ ಮಂಜುನಾಥ್ (53) ಎಂಬಾತನನ್ನು ಪೊಲೀಸರು ಭಾನುವಾರ ರಾತ್ರಿ ಬಂಧಿಸಿದ್ದಾರೆ.

ಬನ್ನಿಮಂಟಪದ ನಿವಾಸಿ ಫಕೀರಪ್ಪ ಎಂಬವರ ಪುತ್ರ ಮಂಜುನಾಥ್ 22 ದಿನಗಳಿಂದ ತಲೆಮರೆಸಿಕೊಂಡಿದ್ದ.

7ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶ ಚಂದ್ರಶೇಖರ ಎದುರು ಪೊಲೀಸರು ಆರೋಪಿಯನ್ನು ಭಾನುವಾರ ರಾತ್ರಿ ಹಾಜರುಪಡಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದರು.

ನಿರೀಕ್ಷಣಾ ಜಾಮೀನಿಗೆ ಸಲ್ಲಿಸಿದ್ದ ಅರ್ಜಿ ವಿಚಾರಣೆ ಬಾಕಿ ಇದೆ. ಜುಲೈ 3ರಂದು ಸಂಜೆ ನಜರ್‌ಬಾದ್‌ನ ಸರ್ಕಾರಿ ಅತಿಥಿ ಗೃಹದಲ್ಲಿ ಜಿಲ್ಲಾಧಿಕಾರಿ ಶಿಖಾ ಅವರ ಕಾರು ತಡೆದು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದರು.

ಪ್ರಮುಖ ಆರೋಪಿ ಕಾಂಗ್ರೆಸ್ ಮುಖಂಡ ಕೆ.ಮರೀಗೌಡ ಸೇರಿದಂತೆ ಇನ್ನೂ ನಾಲ್ವರು ತಲೆ ಮರೆಸಿಕೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.