ADVERTISEMENT

ಜೆಡಿಎಸ್‌ ರಾಜ್ಯಾಧ್ಯಕ್ಷ ಎ.ಕೃಷ್ಣಪ್ಪ ವಿಧಿವಶ

​ಪ್ರಜಾವಾಣಿ ವಾರ್ತೆ
Published 23 ಏಪ್ರಿಲ್ 2014, 16:17 IST
Last Updated 23 ಏಪ್ರಿಲ್ 2014, 16:17 IST

ಬೆಂಗಳೂರು (ಪಿಟಿಐ): ಜನತಾದಳ (ಜಾತ್ಯತೀತ) ರಾಜ್ಯ ಘಟಕದ ಅಧ್ಯಕ್ಷ ಎ. ಕೃಷ್ಣಪ್ಪ ಅವರು ಕೆ.ಆರ್‌.ಪುರಂನ ಸೂಪರ್‌ ಸ್ಪೇಷಾಲಿಟಿ ಆಸ್ಪತ್ರೆಯಲ್ಲಿ ಬುಧವಾರ ಹೃದಯಾಘಾತದಿಂದ ನಿಧನರಾದರು. ಅವರಿಗೆ 68 ವರ್ಷ ವಯಸ್ಸಾಗಿತ್ತು.

ಮೃತರು ಪತ್ನಿ, ಇಬ್ಬರು ಪುತ್ರಿಯರು ಹಾಗೂ ಓರ್ವ ಪುತ್ರನನ್ನು ಅಗಲಿದ್ದಾರೆ. ಚಿತ್ರದುರ್ಗದ ಹಿರಿಯೂರು ಕೃಷ್ಣಪ್ಪ ಅವರ ಹುಟ್ಟೂರು.

ಟ್ರೇಡ್‌ ಯೂನಿಯನ್‌ ಮುಖಂಡರಾಗಿದ್ದ ಕೃಷ್ಣಪ್ಪ ಅವರು 1985ರಲ್ಲಿ ರಾಜಕೀಯ ಪ್ರವೇಶಿಸಿದ್ದರು. ವರ್ತೂರು ಕ್ಷೇತ್ರದಿಂದ ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. ಎಂಟು ವರ್ಷಗಳ ಕಾಲ ಸಚಿವರಾಗಿದ್ದ ಅವರು, ತೋಟಗಾರಿಕೆ, ಪಶು ಸಂಗೋಪನೆ, ಸಕ್ಕರೆ ಹಾಗೂ ಸಮಾಜ ಕಲ್ಯಾಣ ಖಾತೆಗಳನ್ನು ನಿಭಾಯಿಸಿದ್ದರು.

ADVERTISEMENT

ಸುಮಾರು 30 ವರ್ಷಗಳ ಕಾಲ ಕಾಂಗ್ರೆಸ್‌ನಲ್ಲಿದ್ದ ಕೃಷ್ಣಪ್ಪ ಅವರು ,  2013ರ  ರಾಜ್ಯ ವಿಧಾನಸಭೆಯ ವೇಳೆ ಟಿಕೆಟ್‌ ನಿರಾಕರಿಸಿದ್ದರಿಂದ ಜೆಡಿಎಸ್‌ ಸೇರಿದ್ದರು. ಕಳೆದ ಸೆಪ್ಟಂಬರ್‌ ವೇಳೆಗೆ ಜೆಡಿಎಸ್‌ ಪಕ್ಷದ ರಾಜ್ಯ ಘಟಕದ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು. ಜೊತೆಗೆ ತುಮಕೂರು ಲೋಕಸಭಾ ಕ್ಷೇತ್ರದ ಜೆಡಿಎಸ್‌ ಅಭ್ಯರ್ಥಿಯಾಗಿಯೂ ಅವರು ಕಣಕ್ಕಿಳಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.