ADVERTISEMENT

ಡಿಐಜಿ ರೂಪಾ ವಿರುದ್ಧ ₹50 ಕೋಟಿ ಮಾನನಷ್ಟ ಮೊಕದ್ದಮೆ: ನೋಟಿಸ್‌

​ಪ್ರಜಾವಾಣಿ ವಾರ್ತೆ
Published 26 ಜುಲೈ 2017, 20:20 IST
Last Updated 26 ಜುಲೈ 2017, 20:20 IST
ಡಿಐಜಿ ಡಿ.ರೂಪಾ
ಡಿಐಜಿ ಡಿ.ರೂಪಾ   

ಬೆಂಗಳೂರು: ‘ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಬಂದಿಯಾಗಿರುವ ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ವಿ.ಕೆ.ಶಶಿಕಲಾಗೆ  ವಿಶೇಷ ಆತಿಥ್ಯ ನೀಡಲು ₹2 ಕೋಟಿ ಲಂಚ ಪಡೆಯಲಾಗಿದೆ’ ಎಂದು ಆರೋಪಿಸಿದ್ದ ಡಿಐಜಿ ಡಿ.ರೂಪಾ ಅವರಿಗೆ ಡಿಜಿಪಿ ಎಚ್‌.ಎನ್‌. ಸತ್ಯನಾರಾಯಣರಾವ್‌ ಪರ ವಕೀಲರು ನೋಟಿಸ್‌ ನೀಡಿದ್ದಾರೆ.

‘ನೋಟಿಸ್ ತಲುಪಿದ ಮೂರು ದಿನಗಳೊಳಗೆ ಬಹಿರಂಗವಾಗಿ ಕ್ಷಮೆ ಯಾಚಿಸಬೇಕು. ಇಲ್ಲದಿದ್ದರೆ, ನಿಮ್ಮ (ರೂಪಾ) ವಿರುದ್ಧ ₹50 ಕೋಟಿ ಮೌಲ್ಯದ ಮಾನನಷ್ಟ ಮೊಕದ್ದಮೆ ದಾಖಲಿಸಲಾಗುವುದು’ ಎಂದು ವಕೀಲ ಪುತ್ತಿಗೆ ಆರ್‌. ರಮೇಶ್‌ ನೋಟಿಸ್‌ನಲ್ಲಿ ಉಲ್ಲೇಖಿಸಿದ್ದಾರೆ.

‘2017ರ ಜುಲೈ 12ರಂದು ನೀವು ಮಾಡಿದ್ದ ಆರೋಪ ರಾಜ್ಯ, ರಾಷ್ಟ್ರೀಯ ಮಾಧ್ಯಮಗಳಲ್ಲಿ ಸುದ್ದಿ ಆಗಿದೆ. ಅದರ ಬಳಿಕವೂ ನೀವು ಆರೋಪ ಮಾಡುತ್ತಲೇ ಇದ್ದೀರಿ. ಇದರಿಂದ ಇಲಾಖೆಯ ಉನ್ನತ ಹುದ್ದೆಗಳಲ್ಲಿ ಕರ್ತವ್ಯ ನಿರ್ವಹಿಸಿದ್ದ ನನ್ನ ಕಕ್ಷಿದಾರರ (ಸತ್ಯನಾರಾಯಣ ರಾವ್‌) ಗೌರವ, ಘನತೆಗೆ ಧಕ್ಕೆ ಉಂಟಾಗಿದೆ’ ಎಂದು ಅವರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.