ADVERTISEMENT

ಡಿಪ್ಲೊಮಾ ಪ್ರವೇಶಕ್ಕೆ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

​ಪ್ರಜಾವಾಣಿ ವಾರ್ತೆ
Published 25 ಮೇ 2017, 19:30 IST
Last Updated 25 ಮೇ 2017, 19:30 IST
ಬೆಂಗಳೂರು: ಸರ್ಕಾರಿ ಮತ್ತು ಅನುದಾನಿತ ಪಾಲಿಟೆಕ್ನಿಕ್ ಕಾಲೇಜುಗಳಲ್ಲಿ 2017–18ನೇ ಸಾಲಿನ ಪ್ರಥಮ ವರ್ಷದ ಡಿಪ್ಲೊಮಾ ಕೋರ್ಸ್‌  ಪ್ರವೇಶಕ್ಕೆ ಅರ್ಜಿ ಸಲ್ಲಿಸುವ ದಿನಾಂಕವನ್ನು ಜೂನ್ 5ರವರೆಗೆ ವಿಸ್ತರಿಸಲಾಗಿದೆ.
 
ಈ ಮೊದಲು ಹೊರಡಿಸಿರುವ ಅಧಿಸೂಚನೆಯಲ್ಲಿ ಇದೇ 25 ಅರ್ಜಿ ಸಲ್ಲಿಕೆಗೆ ಕೊನೆಯ ದಿನ ಎಂದು ಹೇಳಲಾಗಿತ್ತು. ಹೆಚ್ಚಿನ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಅನುಕೂಲ ಆಗುವಂತೆ ದಿನಾಂಕ ವಿಸ್ತರಣೆ ಮಾಡಲಾಗಿದೆ. 
 
ಎಸ್‌ಎಸ್‌ಎಲ್‌ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಪಾಸಾಗಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಜಿ ನಮೂನೆ ಮತ್ತು ಮಾಹಿತಿ ಪುಸ್ತಕವನ್ನು http://dte.kar.nic.in ಮತ್ತು kea.kar.nic.in ವೆಬ್‌ಸೈಟ್‌ಗಳಿಂದ ಡೌನ್‌ಲೋಡ್ ಮಾಡಿಕೊಳ್ಳಬಹುದು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.