ADVERTISEMENT

ತಮಿಳುನಾಡಿಗೆ ಕಾವೇರಿ ನೀರು ಹರಿಸುವ ಪ್ರಶ್ನೆಯೇ ಇಲ್ಲ: ರಾಜ್ಯ ಸರ್ಕಾರ

ಪಿಟಿಐ
Published 24 ಮಾರ್ಚ್ 2017, 13:57 IST
Last Updated 24 ಮಾರ್ಚ್ 2017, 13:57 IST
ತಮಿಳುನಾಡಿಗೆ ಕಾವೇರಿ ನೀರು ಹರಿಸುವ ಪ್ರಶ್ನೆಯೇ ಇಲ್ಲ: ರಾಜ್ಯ ಸರ್ಕಾರ
ತಮಿಳುನಾಡಿಗೆ ಕಾವೇರಿ ನೀರು ಹರಿಸುವ ಪ್ರಶ್ನೆಯೇ ಇಲ್ಲ: ರಾಜ್ಯ ಸರ್ಕಾರ   

ಬೆಂಗಳೂರು: ರಾಜ್ಯದಲ್ಲಿ ನೀರಿನ ಸಮಸ್ಯೆ ಎದುರಾಗಿದ್ದು, ತಮಿಳುನಾಡಿಗೆ ಕಾವೇರಿ ನೀರು ಹರಿಸುವ ಪ್ರಶ್ನೆಯೇ ಇಲ್ಲ ಎಂದು ರಾಜ್ಯ ಸರ್ಕಾರ ತಿಳಿಸಿದೆ.

‘ಕುಡಿಯು ನೀರಿಗೂ ಅಭಾವ ಉಂಟಾಗಿದೆ. ಬೆಂಗಳೂರು, ಮೈಸೂರು ಹಾಗೂ ಸುತ್ತಲಿನ ಪ್ರದೇಶಗಳಿಗೆ ಕುಡಿಯುವ ನೀರು ಪೂರೈಕೆಗೆ 3–4 ಟಿಎಂಸಿ ನೀರು ಕೊರತೆ ಉಂಟಾಗಿದೆ.

‘ಸದ್ಯ ನೀರು ಹರಿಸುವ ಪ್ರಶ್ನೆಯೇ ಇಲ್ಲ ಎಂದು ಜಲ ಸಂಪನ್ಮೂಲ ಸಚಿವ ಎಂ.ಬಿ .ಪಾಟೀಲ ಪ್ರತಿಕ್ರಿಯಿಸಿದರು.

ADVERTISEMENT

ಹಿಂದಿನ ಆದೇಶದಂತೆ ತಮಿಳುನಾಡಿಗೆ ಕರ್ನಾಟಕದಿಂದ ನಿತ್ಯ 2000 ಕ್ಯೂಸೆಕ್‌ ನೀರು ಹರಿಸುವಂತೆ ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿ ದೀಪಕ್‌ ಮಿಶ್ರಾ ನೇತೃತ್ವದ ನ್ಯಾಯಪೀಠ  ಮಾರ್ಚ್‌ 21ರ ವಿಚಾರಣೆ ವೇಳೆ ಸೂಚಿಸಿತ್ತು.

ಕರ್ನಾಟಕ, ತಮಿಳುನಾಡು ಹಾಗೂ ಕೇರಳ ರಾಜ್ಯಗಳು ಸಲ್ಲಿಸಿರುವ ಪ್ರಕರಣದ ಅಂತಿಮ ವಿಚಾರಣೆಯನ್ನು ಜುಲೈ 11ರಂದು ನಡೆಸುವುದಾಗಿ ಸುಪ್ರೀಂ ಕೋರ್ಟ್‌ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.