ADVERTISEMENT

ತಾಲ್ಲೂಕು ಕಚೇರಿಗೆ ವಿದ್ಯುತ್ ಸಂಪರ್ಕ ಕಡಿತ

​ಪ್ರಜಾವಾಣಿ ವಾರ್ತೆ
Published 30 ಜೂನ್ 2015, 19:30 IST
Last Updated 30 ಜೂನ್ 2015, 19:30 IST

ಬಾಗೇಪಲ್ಲಿ (ಚಿಕ್ಕಬಳ್ಳಾಪುರ ಜಿಲ್ಲೆ): ಬಿಲ್ ಪಾವತಿಸದ ಕಾರಣ ತಾಲ್ಲೂಕು ಕಚೇರಿಗೆ ವಿದ್ಯುತ್ ಸಂಪರ್ಕ ಕಡಿತಗೊ ಳಿಸಲಾಗಿದೆ. ಕಚೇರಿ ಕೆಲಸ ಕಾರ್ಯ ಗಳಿಗಾಗಿ ಬರುವ ಜನರು ಪರದಾಡು ವಂತಾಗಿದೆ.

ಬೆಸ್ಕಾಂಗೆ ತಾಲ್ಲೂಕು ಕಚೇರಿ ₹ 21,500 ವಿದ್ಯುತ್ ಬಿಲ್ ಬಾಕಿ ಪಾವತಿ ಸಬೇಕಿದೆ. ಸಕಾಲಕ್ಕೆ ಬಿಲ್ ಪಾವತಿಸದ ಕಾರಣ ವಿದ್ಯುತ್ ಸಂಪರ್ಕ  ಕಡಿತಗೊ ಳಿಸಲಾಗಿದೆ ಎಂದು ಬೆಸ್ಕಾಂ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ವಾಸು ದೇವ್ ‘ಪ್ರಜಾವಾಣಿ’ಗೆ ತಿಳಿಸಿದರು.

ತಾಲ್ಲೂಕು ಕಚೇರಿಯಲ್ಲಿ ಭೂ ದಾಖಲೆಗೆ ಸಂಬಂಧಿತ ಕೆಲಸವಿತ್ತು. ಅದಕ್ಕಾಗಿ 40 ಕಿ.ಮೀ ದೂರದಿಂದ ಬಂದಿದ್ದೇನೆ. ಆದರೆ ಇಲ್ಲಿ ವಿದ್ಯುತ್ ಸಂಪರ್ಕ ಇಲ್ಲದೆ ಯಾವ ಕೆಲಸವೂ ಆಗುತ್ತಿಲ್ಲ ಎಂದು ರೈತರಾದ ನಂದೀಶ ಬೇಸರ ವ್ಯಕ್ತಪಡಿಸಿದರು. ತಾಲ್ಲೂಕು ಕಚೇರಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕರ್ನಾಟಕ ಸ್ಟೇಟ್ ವೈಡ್ ಏರಿಯಾ ನೆಟ್‌ವರ್ಕ್ ಕಂಪೆನಿ ಸಕಾಲಕ್ಕೆ ವಿದ್ಯುತ್ ಬಿಲ್ ಪಾವತಿಸಿಲ್ಲ. ಬೆಸ್ಕಾಂ ವಿದ್ಯುತ್ ಸಂಪರ್ಕ ಕಡಿತಗೊಳಿಸಿದೆ ಎಂದು ತಹಶೀ ಲ್ದಾರ್ ಎಂ.ನಾಗರಾಜು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT