ADVERTISEMENT

ತುರ್ತು ಬಾಗಿಲು ಅಳವಡಿಸದಿದ್ದರೆ ಕ್ರಮ – ಸಾರಿಗೆ ಸಚಿವ ಎಚ್ಚರಿಕೆ

​ಪ್ರಜಾವಾಣಿ ವಾರ್ತೆ
Published 16 ಏಪ್ರಿಲ್ 2014, 19:30 IST
Last Updated 16 ಏಪ್ರಿಲ್ 2014, 19:30 IST

ಬೆಂಗಳೂರು: ‘ತುರ್ತು ನಿರ್ಗಮನ ದ್ವಾರ ಅಳವಡಿಸಲು ಖಾಸಗಿ ಬಸ್‌ ಮಾಲೀಕರು ಉದಾಸೀನ ತೋರಿದರೆ ಅಂಥ ಬಸ್‌ಗಳ ಸಂಚಾರವನ್ನೇ ಸ್ಥಗಿತಗೊಳಿಸಲು ಕ್ರಮ­ಕೈಗೊಳ್ಳ­ಲಾಗುವುದು’ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು.

‘ತುರ್ತು ನಿರ್ಗಮನ ದ್ವಾರ ಇಲ್ಲದಿದ್ದರೆ ಪ್ರಾದೇಶಿಕ ಸಾರಿಗೆ ಕಚೇರಿಯಲ್ಲಿ ಬಸ್‌ಗಳಿಗೆ ಅರ್ಹತಾ ಪ್ರಮಾಣಪತ್ರ ನೀಡುವುದಿಲ್ಲ. ಸುರಕ್ಷತೆ ವಿಷಯದಲ್ಲಿ ಸರ್ಕಾರ ಬಿಗಿ ಕ್ರಮಗಳನ್ನು ಕೈಗೊಂಡಿದೆ’ ಎಂದರು.

‘ಹಿರಿಯೂರು ತಾಲ್ಲೂಕಿನ ಮೇಟಿಕುರ್ಕಿ ಬಳಿ ಅಪಘಾತಕ್ಕೀಡಾದ ಖಾಸಗಿ ಬಸ್‌ ಅಶೋಕ್‌ ಲೇಲ್ಯಾಂಡ್‌ ಕಂಪೆನಿಯದ್ದು. ಬಸ್‌ಗೆ ಸಂಬಂಧಿಸಿದ ದಾಖಲೆಗಳು ಸಮಪರ್ಕವಾಗಿವೆ. ಅಪಘಾತಕ್ಕೆ ಎಂಜಿನ್‌ನಲ್ಲಿ ಕಾಣಿಸಿಕೊಂಡ ಬೆಂಕಿ ಕಾರಣವಾಗಿದೆ. ಗಾಬರಿಗೊಂಡ ಚಾಲಕ ಬ್ರೇಕ್‌ ಹಾಕಿದಾಗ ಬಸ್‌ ಕಂದಕಕ್ಕೆ ಉರುಳಿ ಈ ದುರ್ಘಟನೆ ಸಂಭವಿಸಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ. ಈ ಬಗ್ಗೆ ಸಮಗ್ರ ತನಿಖೆ ನಡೆಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ’ ಎಂದು ಅವರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.