ADVERTISEMENT

ದಲಿತ ವಿರೋಧಿ ನಡೆಗೆ ಟೀಕೆ

​ಪ್ರಜಾವಾಣಿ ವಾರ್ತೆ
Published 29 ಏಪ್ರಿಲ್ 2017, 19:57 IST
Last Updated 29 ಏಪ್ರಿಲ್ 2017, 19:57 IST
ಮಂಡ್ಯದಲ್ಲಿ ಶನಿವಾರ ನಡೆದ ಸಮಾವೇಶದಲ್ಲಿ ಡಾ.ಬಿ.ಆರ್‌.ಅಂಬೇಡ್ಕರ್‌ ಮೊಮ್ಮಗ ಆನಂದ್‌ರಾಜ್‌ ಮಾತನಾಡಿದರು
ಮಂಡ್ಯದಲ್ಲಿ ಶನಿವಾರ ನಡೆದ ಸಮಾವೇಶದಲ್ಲಿ ಡಾ.ಬಿ.ಆರ್‌.ಅಂಬೇಡ್ಕರ್‌ ಮೊಮ್ಮಗ ಆನಂದ್‌ರಾಜ್‌ ಮಾತನಾಡಿದರು   

ಮಂಡ್ಯ:  ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ವಿರುದ್ಧ  ನಡೆದುಕೊಳ್ಳುತ್ತಿರುವುದು ದುರಂತ ಎಂದು ಡಾ.ಬಿ.ಆರ್‌.ಅಂಬೇಡ್ಕರ್ ಮೊಮ್ಮಗ ಆನಂದ್‌ರಾಜ್‌ ವಿಷಾದಿಸಿದರು.

ನಗರದ ಸರ್ಕಾರಿ ಮಹಾವಿದ್ಯಾಲಯದ ಆವರಣದಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ನೌಕರರ ಬಳಗದಿಂದ ಅಂಬೇಡ್ಕರ್‌ ಜಯಂತಿ ಅಂಗವಾಗಿ ಶನಿವಾರ ನಡೆದ ಮೀಸಲಾತಿ ರಕ್ಷಣೆಗಾಗಿ ಬೃಹತ್‌ ಸಮಾವೇಶ ಉದ್ಘಾಟಿಸಿ ಮಾತನಾಡಿದರು.

ಕೇಂದ್ರವು ವಿರುದ್ಧವಾಗಿದ್ದರೂ, ರಾಜ್ಯ ಸರ್ಕಾರವು ಪರಿಶಿಷ್ಟ ಜಾತಿ ಹಾಗೂ ಪಂಗಡದ ಜನರ ಪರವಾಗಿ ಕೆಲಸ ಮಾಡುತ್ತಿದೆ. ಜತೆಗೆ ಅಂಬೇಡ್ಕರ್‌ ಆಶಯದಂತೆ ನಡೆದುಕೊಳ್ಳುತ್ತಿದೆ ಎಂದರು.

ADVERTISEMENT

ಮನುವಾದಿಗಳು ‘ಮನುಸ್ಮೃತಿ’ ಮೂಲಕ ದೇಶದಲ್ಲಿ ಅಶಾಂತಿ ಉಂಟು ಮಾಡಲು ಹೊರಟಿದ್ದಾರೆ ಎಂದು ಅವರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.