ADVERTISEMENT

‘ನನ್ನನ್ನು ಮಟ್ಟಹಾಕಲು ಆರ್‌ಎಸ್‌ಎಸ್‌ ಪ್ರಯತ್ನ’

ಮುಖ್ಯಮಂತ್ರಿಯವರ ಮಾಧ್ಯಮ ಸಲಹೆಗಾರ ದಿನೇಶ್ ಅಮೀನ್‌ ಮಟ್ಟು ಹೇಳಿಕೆ

​ಪ್ರಜಾವಾಣಿ ವಾರ್ತೆ
Published 24 ಸೆಪ್ಟೆಂಬರ್ 2017, 19:30 IST
Last Updated 24 ಸೆಪ್ಟೆಂಬರ್ 2017, 19:30 IST

ಮಂಗಳೂರು: ‘ಆರ್‌ಎಸ್‌ಎಸ್ ನನ್ನನ್ನು ಮಟ್ಟಹಾಕುವ ಪ್ರಯತ್ನ ಆರಂಭಿಸಿದೆ. ಕಾರ್ಕಳದಲ್ಲಿ ಇತ್ತೀಚೆಗೆ ನಡೆದ ಆರ್‌ಎಸ್‌ಎಸ್‌ ಸಭೆಯಲ್ಲಿ ಈ ಕುರಿತು ಚರ್ಚೆ ನಡೆಸಲಾಗಿದೆ’ ಎಂದು ಮುಖ್ಯಮಂತ್ರಿಯವರ ಮಾಧ್ಯಮ ಸಲಹೆಗಾರ ದಿನೇಶ್ ಅಮೀನ್‌ ಮಟ್ಟು ಹೇಳಿದರು.

ಇಲ್ಲಿನ ಸೇಂಟ್ ಅಲೋಶಿಯಸ್‌ ಕಾಲೇಜಿನ ಸಭಾಂಗಣದಲ್ಲಿ ನಾರಾಯಣ ಗುರು ವಿಚಾರ ಕಮ್ಮಟ (ನಾವಿಕ) ವತಿಯಿಂದ ಭಾನುವಾರ ಆಯೋಜಿಸಿದ್ದ ಬ್ರಹ್ಮಶ್ರೀ ನಾರಾಯಣ ಗುರುಗಳಿಗೆ ಸಂಬಂಧಿಸಿದ ವಿಚಾರ ಸಂಕಿರಣ ಉದ್ಘಾಟಿಸಿ, ಮಾತನಾಡುವ ವೇಳೆ ಅವರು ಈ ವಿಷಯ ತಿಳಿಸಿದರು.

‘ಕಾರ್ಕಳದಲ್ಲಿ ಇತ್ತೀಚೆಗೆ ಆರ್‌ಎಸ್‌ಎಸ್‌ ಪ್ರಮುಖರ ಸಭೆ ನಡೆದಿದೆ. ಆರ್‌ಎಸ್‌ಎಸ್‌ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್‌ ಕೂಡ ಆ ಸಭೆಯಲ್ಲಿದ್ದರು. ಮಟ್ಟುವನ್ನು ಮಟ್ಟ ಹಾಕಲೇಬೇಕು ಎಂಬುದಾಗಿ ಆ ಸಭೆಯಲ್ಲಿ ಚರ್ಚೆ ನಡೆಸಿದ್ದಾರೆ ಎಂದು ಗುಪ್ತಚರ ದಳದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ’ ಎಂದರು.

ADVERTISEMENT

‘ಮೊನ್ನೆ ಗೌರಿ ಲಂಕೇಶ್ ಅವರಿಗೆ ಬಿದ್ದ ಗುಂಡು ನಾಳೆ ನನಗೂ ಬೀಳಬಹುದು. ಸಾವಿಗೆ ನಾನು ಹೆದರುವುದಿಲ್ಲ. ಆದರೆ, ನಾವು ಮಾಡಬೇಕಾದ ಕೆಲಸಗಳು ಸಾಕಷ್ಟಿವೆ. ಅವುಗಳನ್ನು ಮಾಡಲಾಗದೇ ಅತೃಪ್ತ ಆತ್ಮಗಳಾಗಿ ಸಾಯಬಾರದು’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.