ADVERTISEMENT

ನಾಡಿಗೆ ಬೇಕಿರುವುದು ಸಾಮಾಜಿಕ ನ್ಯಾಯದ ರಾಜ್ಯ, ಪ್ರತ್ಯೇಕ ರಾಜ್ಯ ಅಲ್ಲ

​ಪ್ರಜಾವಾಣಿ ವಾರ್ತೆ
Published 2 ಡಿಸೆಂಬರ್ 2016, 12:09 IST
Last Updated 2 ಡಿಸೆಂಬರ್ 2016, 12:09 IST
ನಾಡಿಗೆ ಬೇಕಿರುವುದು ಸಾಮಾಜಿಕ ನ್ಯಾಯದ ರಾಜ್ಯ, ಪ್ರತ್ಯೇಕ ರಾಜ್ಯ ಅಲ್ಲ
ನಾಡಿಗೆ ಬೇಕಿರುವುದು ಸಾಮಾಜಿಕ ನ್ಯಾಯದ ರಾಜ್ಯ, ಪ್ರತ್ಯೇಕ ರಾಜ್ಯ ಅಲ್ಲ   

ರಾಯಚೂರು: ಇಲ್ಲಿ ನಡೆಯುತ್ತಿರುವ 82ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿ ಮಾತನಾಡಿದ ಪ್ರೊ.ಬರಗೂರು ರಾಮಚಂದ್ರಪ್ಪ ಅವರು ನಾಡಿಗೆ ಬೇಕಿರುವುದು ಸಾಮಾಜಿಕ ನ್ಯಾಯದ ರಾಜ್ಯ, ಪ್ರತ್ಯೇಕ ರಾಜ್ಯ ಅಲ್ಲ ಎಂದಿದ್ದಾರೆ.

ಪ್ರತ್ಯೇಕ ರಾಜ್ಯದ ಬೇಡಿಕೆ ಇಡುತ್ತಿರುವವರು ಪ್ರತ್ಯೇಕತೆಯೊಂದೇ ಪರಿಹಾರವೇ? ಎಂಬ ಪ್ರಶ್ನೆ ಕೇಳಿಕೊಳ್ಳಬೇಕು. ಸಾಮಾಜಿಕ, ಆರ್ಥಿಕ ಸಮಾನತೆಯಡಿ ಸಮತೋಲನದ ಅಭಿವೃದ್ಧಿ ಇಲ್ಲದಿದ್ದರೆ ಕರ್ನಾಟಕದಲ್ಲಿ ಒಡಕು ಹುಟ್ಟುತ್ತದೆ. ಭಾಷೆ ಮತ್ತು ಭೂಗೋಳದ ಸಂಬಂಧವಷ್ಟೇ ಕನ್ನಡಾಭಿಮಾನ ಅಲ್ಲ ಎಂದು ಅವರು ಹೇಳಿದ್ದಾರೆ.

ಕನ್ನಡ ರಾಜವಂಶಗಳ ಸಾಮ್ರಾಜ್ಯಗಳನ್ನು ಇಡಿಯಾಗಿ ಕನ್ನಡ ಪ್ರದೇಶಗಳೆಂದು ಕರೆಯುವುದು ಚಾರಿತ್ರಿಕವಾಗಿ ಸರಿಯಲ್ಲ.

ರಾಜ್ಯಗಳು ಸಂಯುಕ್ತ ಭಾರತದ ಭಾಗವಾಗುವ ಬದಲು 'ಕೇಂದ್ರ'ದ ತೋರು ಬೆರಳ ದಾರಿಯ ಪಾದಚಾರಿ ಆಗುತ್ತಿವೆ ಎಂದ ಅವರು ಎಂ.ಎಂ. ಕಲಬುರ್ಗಿಯವರನ್ನು ಕೊಲೆ ಮಾಡಿದವರನ್ನು ಶೀಘ್ರ ಪತ್ತೆಹಚ್ಚಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.