ADVERTISEMENT

ನೀತಿ ಸಂಹಿತೆ ಉಲ್ಲಂಘನೆ ಅರವಿಂದ ಮಾಲಗತ್ತಿ, ಬಿ.ಪಿ.ಮಹೇಶಚಂದ್ರ ಗುರು ಅಮಾನತು

​ಪ್ರಜಾವಾಣಿ ವಾರ್ತೆ
Published 24 ಏಪ್ರಿಲ್ 2018, 19:38 IST
Last Updated 24 ಏಪ್ರಿಲ್ 2018, 19:38 IST
ಅರವಿಂದ ಮಾಲಗತ್ತಿ ಮತ್ತು ಮಹೇಶ್‌ಚಂದ್ರ
ಅರವಿಂದ ಮಾಲಗತ್ತಿ ಮತ್ತು ಮಹೇಶ್‌ಚಂದ್ರ   

ಮೈಸೂರು: ಸರ್ಕಾರಿ ಹುದ್ದೆಯಲ್ಲಿದ್ದುಕೊಂಡು ಕಾಂಗ್ರೆಸ್‌ ಪರ ಪ್ರಚಾರ ನಡೆಸಿದ ಆರೋಪದ ಮೇಲೆ ಮೈಸೂರು ವಿಶ್ವವಿದ್ಯಾನಿಲಯದ ಪ್ರಾಧ್ಯಾಪಕರಾದ ಬಿ.ಪಿ.ಮಹೇಶಚಂದ್ರ ಗುರು, ಅರವಿಂದ ಮಾಲಗತ್ತಿ ಅವರನ್ನು ಅಮಾನತು ಮಾಡಲಾಗಿದೆ.

ಕ್ರಮ ತೆಗೆದುಕೊಳ್ಳುವಂತೆ ರಾಜ್ಯ ಚುನಾವಣಾ ಆಯೋಗವು ಪತ್ರ ಬರೆದು ಸೂಚಿಸಿದ ಹಿನ್ನೆಲೆಯಲ್ಲಿ ವಿಶ್ವವಿದ್ಯಾನಿಲಯವು ಅಮಾನುಗೊಳಿಸಿ ಮಂಗಳವಾರ ಆದೇಶ ಹೊರಡಿಸಿದೆ.

ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದಲ್ಲಿ ಮಹೇಶಚಂದ್ರ ಗುರು ಕಾರ್ಯ ನಿರ್ವಹಿಸುತ್ತಿದ್ದರು. ಮಾಲಗತ್ತಿ ಅವರು ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯಲ್ಲಿ ಪ್ರಾಧ್ಯಾಪಕರಾಗಿದ್ದು, ಪ್ರಸ್ತುತ ಕರ್ನಾಟಕ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾಗಿದ್ದಾರೆ.

ADVERTISEMENT

ಈಚೆಗೆ ನಗರದಲ್ಲಿ ‘ಜನರಾಜಕಾರಣ’ ಕಾರ್ಯಕ್ರಮದ ಸಂದರ್ಭದಲ್ಲಿ ಕಾಂಗ್ರೆಸ್‌, ಸಿದ್ದರಾಮಯ್ಯ ಪರ ಪ್ರಚಾರ ನಡೆಸಿದ್ದರು ಎಂಬ ಆರೋಪ ಕೇಳಿಬಂದಿತ್ತು. ಪ್ರಾಧ್ಯಾಪಕರ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಚುನಾವಣಾ ಅಧಿಕಾರಿಗಳು ವಿ.ವಿ.ಗೆ ಪತ್ರ ಬರೆದಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.