ADVERTISEMENT

ನೀನಾಸಂ: ಅರ್ಜಿ ಆಹ್ವಾನ

​ಪ್ರಜಾವಾಣಿ ವಾರ್ತೆ
Published 15 ಮೇ 2015, 19:30 IST
Last Updated 15 ಮೇ 2015, 19:30 IST

ಬೆಂಗಳೂರು: ಸಾಗರ ಹೆಗ್ಗೋಡಿನ ನೀನಾಸಂ ರಂಗಶಿಕ್ಷಣ ಕೇಂದ್ರವು 2015-16ನೇ ಸಾಲಿನ ‘ಡಿಪ್ಲೊಮಾ ಇನ್‌ ಥಿಯೇಟರ್‌ ಆರ್ಟ್ಸ್’ ಶಿಕ್ಷಣಕ್ಕೆ ಅರ್ಜಿ ಆಹ್ವಾನಿಸಿದೆ.

ಅರ್ಜಿ ಸಲ್ಲಿಸುವವರು ಕನಿಷ್ಠ ಎಸ್ಸೆಸ್ಸೆಲ್ಸಿ  ಉತ್ತೀರ್ಣರಾಗಿರಬೇಕು. ಪದವೀಧರರಿಗೆ ಆದ್ಯತೆ ನೀಡಲಾಗುವುದು. ರಂಗಭೂಮಿಯಲ್ಲಿ ಆಸಕ್ತಿಯಿದ್ದು, ಸ್ವಲ್ಪ ಮಟ್ಟಿನ ಅನುಭವ ಅಗತ್ಯ.  ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ಊಟ, ವಸತಿ ವ್ಯವಸ್ಥೆ ನೀಡಲಾಗುವುದು. 15 ಮಂದಿಗೆ ವಿದ್ಯಾರ್ಥಿ ವೇತನ ನೀಡಲಾಗುವುದು.

ಕೇಂದ್ರದಲ್ಲಿ ವಿದ್ಯಾರ್ಥಿಗಳಿಗೆ ರಂಗಕಲ್ಪನೆ, ರಂಗ ಇತಿಹಾಸ, ನಾಟಕ ಇತಿಹಾಸ, ರಂಗನಟನೆ, ರಂಗಸಿದ್ಧತೆ, ರಂಗವ್ಯವಸ್ಥೆ ಕುರಿತು ಸೈದ್ಧಾಂತಿಕ ಹಾಗೂ ಪ್ರಾಯೋಗಿಕ ಶಿಕ್ಷಣ ನೀಡಲಾಗುವುದು. ಕೇಂದ್ರದ ಶಿಕ್ಷಕರ ಜೊತೆಗೆ ನಾಡಿನ ಪ್ರಸಿದ್ಧ ತಜ್ಞರು ತರಬೇತಿ ನೀಡುವರು.

₨ 250 ನೀಡಿ ಪ್ರವೇಶಪತ್ರ ಪಡೆಯಬಹುದು. ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿಯನ್ನು ಜೂನ್‌ 20ರೊಳಗೆ  ನೀನಾಸಂ ರಂಗಶಿಕ್ಷಣ ಕೇಂದ್ರ, ಹೆಗ್ಗೋಡು, ಸಾಗರ, ಶಿವಮೊಗ್ಗ–577 417  ವಿಳಾಸಕ್ಕೆ ಕಳಿಸಬೇಕು.  ಜೂನ್‌ 27 ಹಾಗೂ 28ರಂದು ಬೆಳಿಗ್ಗೆ 10ರಿಂದ ಸಂಜೆ 5ರ ವರೆಗೆ ಸಂದರ್ಶನ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ. ಮಾಹಿತಿಗೆ: 08183- 265646 ಸಂಪರ್ಕಿಸಿ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.