ADVERTISEMENT

ನೂತನ ಶಿಕ್ಷಣ ನೀತಿ ಜಾರಿಗೆ ಅಭಿಪ್ರಾಯ ಸಂಗ್ರಹ: ಜಾವಡೇಕರ್‌

​ಪ್ರಜಾವಾಣಿ ವಾರ್ತೆ
Published 28 ಆಗಸ್ಟ್ 2016, 11:02 IST
Last Updated 28 ಆಗಸ್ಟ್ 2016, 11:02 IST
ನೂತನ ಶಿಕ್ಷಣ ನೀತಿ ಜಾರಿಗೆ ಅಭಿಪ್ರಾಯ ಸಂಗ್ರಹ: ಜಾವಡೇಕರ್‌
ನೂತನ ಶಿಕ್ಷಣ ನೀತಿ ಜಾರಿಗೆ ಅಭಿಪ್ರಾಯ ಸಂಗ್ರಹ: ಜಾವಡೇಕರ್‌   

ಹುಬ್ಬಳ್ಳಿ: ಕೇಂದ್ರ ಸರ್ಕಾರ ನೂತನ ಶಿಕ್ಷಣ ನೀತಿ ಜಾರಿಗೊಳಿಸಲು ಉದ್ದೇಶಿಸಿದೆ. ಇದಕ್ಕಾಗಿ ಸಾರ್ವಜನಿಕರಿಂದ ಅಭಿಪ್ರಾಯ ಸಂಗ್ರಹಿಸಲಾಗುತ್ತಿದೆ. ಹಳ್ಳಿಯಿಂದ ದಿಲ್ಲಿ ವರೆಗಿನ ಜನರು ತಮ್ಮ ಅಭಿಪ್ರಾಯ ಸಲ್ಲಿಸಬಹುದು ಎಂದು ಮಾನವ ಸಂಪನ್ಮೂಲ ಸಚಿವ ಪ್ರಕಾಶ ಜಾವಡೇಕರ್ ಹೇಳಿದರು.

ಧಾರವಾಡದಲ್ಲಿ ಐಐಟಿ ಉದ್ಘಾಟನೆಗೆ ಭಾನುವಾರ ಬಂದ ಜಾವಡೇಕರ್ ಹುಬ್ಬಳ್ಳಿ ವಿಮಾನನಿಲ್ದಾಣದಲ್ಲಿ ಪತ್ರಕರ್ತರ ಜತೆ ಮಾತನಾಡಿ, ವಿ.ವಿ ಕ್ಯಾಂಪಸ್‌ಗಳಲ್ಲಿ ಆತ್ಮಹತ್ಯೆ ಪ್ರಕರಣಗಳನ್ನು ತಡೆಯಲು ನೇಮಿಸಿದ ನ್ಯಾ.ಎ.ಕೆ. ರೂಪನ್ಕರ್ ಸಮಿತಿ ವರದಿ ಸಲ್ಲಿಸಿದೆ. ಇದರ ಆಧಾರದಲ್ಲಿ ವಿ.ವಿ ಕ್ಯಾಂಪಸ್‌ಗಳಲ್ಲಿ ಸುಧಾರಣೆಗೆ ಕ್ರಮ ಕೈಗೊಳ್ಳಲಾಗುವುದು ಎಂದರು.

ತಿರಂಗಾ ಯಾತ್ರೆ
ಕೇಂದ್ರ ಸಚಿವರಾದ ಪ್ರಕಾಶ ಜಾವಡೇಕರ್‌ ಮತ್ತು ಅನಂತಕುಮಾರ್ ಅವರು ಬಿಜೆಪಿ ಕಾರ್ಯಕರ್ತರು ಹಮ್ಮಿಕೊಂಡಿದ್ದ ತಿರಂಗಾ ಯಾತ್ರೆಯಲ್ಲಿ ಪಾಲ್ಗೊಂಡರು. ಗೋಕುಲ ರಸ್ತೆಯ ಮಂಜುನಾಥ ನಗರ ವೃತ್ತದಲ್ಲಿರುವ ವೀರ ಸಿಂಧೂರ ಲಕ್ಷ್ಮಣ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ನಂತರ ಬೈಕ್‌ ರ‍್ಯಾಲಿ ಆರಂಭಗೊಂಡಿತು. ಸಚಿವರು ಮತ್ತು ಮುಖಂಡರು ಕಾರಿನಲ್ಲಿ ಧಾರವಾಡಕ್ಕೆ ತೆರಳಿದರೆ, ಕಾರ್ಯಕರ್ತರು ಬೈಕ್‌ಗಳಲ್ಲಿ ಸಾಗಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.