ADVERTISEMENT

ನ್ಯಾಯಾಲಯಕ್ಕೆ ರಾಘವೇಶ್ವರ

​ಪ್ರಜಾವಾಣಿ ವಾರ್ತೆ
Published 9 ಅಕ್ಟೋಬರ್ 2015, 19:30 IST
Last Updated 9 ಅಕ್ಟೋಬರ್ 2015, 19:30 IST

ಬೆಂಗಳೂರು: ರಾಮಕಥಾ ಗಾಯಕಿ ಪ್ರೇಮಲತಾ ಅವರ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ, ರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಸ್ವಾಮೀಜಿ ನಗರದ 1ನೇ ಎಸಿಎಂಎಂ ನ್ಯಾಯಾಲಯಕ್ಕೆ ಶುಕ್ರವಾರ ಹಾಜರಾದರು. ಸ್ವಾಮೀಜಿ ಖುದ್ದು ಹಾಜರಾಗಬೇಕು ಎಂದು ನ್ಯಾಯಾಲಯ ಗುರುವಾರ ಸಮನ್ಸ್ ಜಾರಿ ಮಾಡಿತ್ತು.

ನಿಗದಿಯಂತೆ ಅವರು 11 ಗಂಟೆಗೆ   ಹಾಜರಾಗಬೇಕಿತ್ತು. ಆದರೆ, ಸ್ವಾಮೀಜಿ ಪೂಜೆಯಲ್ಲಿ ನಿರತರಾಗಿರುವುದರಿಂದ ಮಧ್ಯಾಹ್ನ 3 ಗಂಟೆಗೆ ಬರಲಿದ್ದಾರೆ ಎಂದು ಅವರ ವಕೀಲರು ಮಾಡಿದ ಮನವಿಗೆ ನ್ಯಾಯಾಧೀಶರು ಒಪ್ಪಿದರು.

ಆದರೆ, ಒಂದು ಗಂಟೆ ಮುಂಚೆಯೇ ಅಂದರೆ 2 ಗಂಟೆಗೆ ಸ್ವಾಮೀಜಿ ನ್ಯಾಯಾಲಯಕ್ಕೆ ಬಂದರು. ನಿರೀಕ್ಷಣಾ ಜಾಮೀನಿನ ಷರತ್ತಿನಂತೆ ₹ 2 ಲಕ್ಷ ಮೊತ್ತದ ಬಾಂಡ್ ಮತ್ತು ಇಬ್ಬರ ಭದ್ರತೆ  ಒದಗಿಸಿದರು. ಈ ದಾಖಲೆಗಳನ್ನು ಪರಿಶೀಲಿಸಿದ ನ್ಯಾಯಾಧೀಶರು, ಪ್ರಕರಣದ ವಿಚಾರಣೆಯನ್ನು ಸೆಷನ್ಸ್‌ ಕೋರ್ಟ್‌ಗೆ ವರ್ಗಾಯಿಸಿ ಆದೇಶಿಸಿದರು. ಸ್ವಾಮೀಜಿ ನ್ಯಾಯಾಲ ಯದಲ್ಲಿ 20 ನಿಮಿಷ ಇದ್ದು  ವಾಪಸಾದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.