ADVERTISEMENT

ಪಿಯುಸಿ ಫಲಿತಾಂಶ: ರಕ್ಷಿತಾ ಪ್ರಥಮ

​ಪ್ರಜಾವಾಣಿ ವಾರ್ತೆ
Published 25 ಮೇ 2016, 6:31 IST
Last Updated 25 ಮೇ 2016, 6:31 IST
ಪಿಯುಸಿಯಲ್ಲಿ ಮೊದಲ ಸ್ಥಾನ ಪಡೆದ ಬೆಂಗಳೂರಿನ ಬಸವೇಶ್ವರನಗರದ ವಿವಿಎಸ್‌ ಸರ್ದಾರ್‌ ಪಟೇಲ್‌ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಟಿ. ರಕ್ಷಿತಾ  –ಚಿತ್ರಕೃಪೆ: ಟಿವಿ9
ಪಿಯುಸಿಯಲ್ಲಿ ಮೊದಲ ಸ್ಥಾನ ಪಡೆದ ಬೆಂಗಳೂರಿನ ಬಸವೇಶ್ವರನಗರದ ವಿವಿಎಸ್‌ ಸರ್ದಾರ್‌ ಪಟೇಲ್‌ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಟಿ. ರಕ್ಷಿತಾ –ಚಿತ್ರಕೃಪೆ: ಟಿವಿ9   

ಬೆಂಗಳೂರು: ಬಸವೇಶ್ವರನಗರದ ವಿವಿಎಸ್‌ ಸರ್ದಾರ್‌ ಪಟೇಲ್‌ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಟಿ. ರಕ್ಷಿತಾ ಈ ಬಾರಿ ದ್ವಿತೀಯ ಪಿಯುಸಿಯಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ.

ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ರಕ್ಷಿತಾ ಅವರು 596 ಅಂಕಗಳನ್ನು ಗಳಿಸಿ ಮೊದಲಿಗರಾಗಿದ್ದಾರೆ.

ವಿಜಾಪುರದ ವಿ.ಬಿ. ದರ್ಬಾರ್‌ ಪಿಯು ಕಾಲೇಜಿನ ವಿದ್ಯಾರ್ಥಿನಿ ಸಹನಾ ಕುಲಕರ್ಣಿ (594 ಅಂಕ) ವಾಣಿಜ್ಯ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ.

ADVERTISEMENT

ಬಳ್ಳಾರಿ ಜಿಲ್ಲೆ ಕೊಟ್ಟೂರಿನ ಇಂದು ಸ್ವತಂತ್ರ ಪಿಯು ಕಾಲೇಜಿನ ವಿದ್ಯಾರ್ಥಿನಿ ಪಿ. ಅನಿತಾ (585 ಅಂಕ) ಕಲಾ ವಿಭಾಗದ ಮೊದಲಿಗರಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.