ADVERTISEMENT

ಪೆರುಂಬಾಡಿ ಬಳಿ ರಸ್ತೆ ಅಪಘಾತ: 3 ಸಾವು

​ಪ್ರಜಾವಾಣಿ ವಾರ್ತೆ
Published 26 ಮೇ 2016, 6:15 IST
Last Updated 26 ಮೇ 2016, 6:15 IST
ಅಪಘಾತದಲ್ಲಿ ನಜ್ಜುಗುಜ್ಜಾಗಿರುವ ಕಾರು
ಅಪಘಾತದಲ್ಲಿ ನಜ್ಜುಗುಜ್ಜಾಗಿರುವ ಕಾರು   

ಮಡಿಕೇರಿ: ಕೊಡಗು ಜಿಲ್ಲೆ ವಿರಾಜಪೇಟೆ ತಾಲ್ಲೂಕಿನ ಪೆರುಂಬಾಡಿ ಬಳಿ ಕಾರಿಗೆ ಲಾರಿ ಡಿಕ್ಕಿಯಾಗಿ 3 ಮಂದಿ ಮೃತಪಟ್ಟು ಐವರು ಗಾಯಗೊಂಡಿದ್ದಾರೆ.

ಕಣ್ಣೂರು- ವಿರಾಜಪೇಟೆ ಹೆದ್ದಾರಿಯಲ್ಲಿ ಗುರುವಾರ ಬೆಳಿಗ್ಗೆ ಈ ಅಪಘಾತ ನಡೆದಿದೆ. ನಜ್ಜುಗುಜ್ಜಾದ ಕಾರಿನಿಂದ ಮೃತದೇಹಗಳನ್ನು ಹೊರಕ್ಕೆ ತೆಗೆಯಲಾಗಿದೆ.

ಮೃತರನ್ನು ಆಶಿಕ್‌ (18), ಮೀನಜ್‌ (19) ಮತ್ತು ಯಾಸಿನ್‌ (18) ಎಂದು ಗುರುತಿಸಲಾಗಿದೆ. ಗಾಯಗೊಂಡ ಮೂರು ಮಂದಿಯನ್ನು ಮೈಸೂರಿಗೆ ಮತ್ತು ಇಬ್ಬರನ್ನು ಕೇರಳದ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ADVERTISEMENT

ಕಾರು ಕೇರಳದಿಂದ ಬೆಂಗಳೂರು ಕಡೆಗೆ ಹೊರಟಿತ್ತು. ವಿರಾಜಪೇಟೆ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.