ADVERTISEMENT

ಪೇಜಾವರ ಶ್ರೀಗಳ ಪಕ್ಕದಲ್ಲೇ ಕಾಲಮೇಲೆ ಕಾಲು ಹಾಕಿ ಕುಳಿತ ತೊಗಾಡಿಯಾ

​ಪ್ರಜಾವಾಣಿ ವಾರ್ತೆ
Published 23 ನವೆಂಬರ್ 2017, 16:41 IST
Last Updated 23 ನವೆಂಬರ್ 2017, 16:41 IST
ಪೇಜಾವರ ಶ್ರೀಗಳ ಪಕ್ಕದಲ್ಲೇ ಕಾಲಮೇಲೆ ಕಾಲು ಹಾಕಿ ಕುಳಿತ ತೊಗಾಡಿಯಾ
ಪೇಜಾವರ ಶ್ರೀಗಳ ಪಕ್ಕದಲ್ಲೇ ಕಾಲಮೇಲೆ ಕಾಲು ಹಾಕಿ ಕುಳಿತ ತೊಗಾಡಿಯಾ   

ಉಡುಪಿ: ವಿಶ್ವ ಹಿಂದೂ ಪರಿಷತ್‌ನ (ವಿಎಚ್‌ಪಿ) ಅಂತರರಾಷ್ಟ್ರೀಯ ಕಾರ್ಯಾಧ್ಯಕ್ಷ ಪ್ರವೀಣ್‌ ತೊಗಾಡಿಯಾ ಅವರು ಪರ್ಯಾಯ ಪೇಜಾವರ ಮಠದ ವಿಶ್ವೇಶ ತೀರ್ಥ ಸ್ವಾಮೀಜಿ ಪಕ್ಕದಲ್ಲಿ ಕಾಲಮೇಲೆ ಕಾಲುಹಾಕಿ ಕುಳಿತ ಫೋಟೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಉಡುಪಿಯಲ್ಲಿ ಶುಕ್ರವಾರ ಆರಂಭವಾಗಲಿರುವ ಧರ್ಮ ಸಂಸತ್‌ಗೆ ಪೂರ್ವಭಾವಿಯಾಗಿ ಗುರುವಾರ ಸಂಜೆ ಆರಂಭವಾದ ಹಿಂದೂ ವೈಭವ ಪ್ರದರ್ಶಿನಿಯ ಉದ್ಘಾಟನಾ ಸಮಾರಂಭದಲ್ಲಿ ತೊಗಾಡಿಯಾ ಭಾಗವಹಿಸಿದ್ದಾರೆ. ಈ ವೇಳೆ ಅವರು 87 ವರ್ಷ ವಯಸ್ಸಿನ ಪೇಜಾವರ ಶ್ರೀಗಳ ಪಕ್ಕದಲ್ಲಿ ಕಾಲಮೇಲೆ ಕಾಲು ಹಾಕಿ ಕುಳಿತಿದ್ದಾರೆ.

ಇದನ್ನೂ ಓದಿ...

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.