ADVERTISEMENT

ಬಾಲಕಿಯ ಮೇಲೆ ದೊಡ್ಡಪ್ಪನಿಂದಲೇ ಅತ್ಯಾಚಾರ

​ಪ್ರಜಾವಾಣಿ ವಾರ್ತೆ
Published 24 ಮಾರ್ಚ್ 2017, 9:58 IST
Last Updated 24 ಮಾರ್ಚ್ 2017, 9:58 IST
ಬಾಲಕಿಯ ಮೇಲೆ ದೊಡ್ಡಪ್ಪನಿಂದಲೇ ಅತ್ಯಾಚಾರ
ಬಾಲಕಿಯ ಮೇಲೆ ದೊಡ್ಡಪ್ಪನಿಂದಲೇ ಅತ್ಯಾಚಾರ   

ಮಂಡ್ಯ: ದೊಡ್ಡಪ್ಪನೇ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಅಮಾನವೀಯ ಘಟನೆ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ಗ್ರಾಮವೊಂದರಲ್ಲಿ ನಡೆದಿದೆ.

ಬಾಲಕಿ ಮೇಲೆ ಐದು ತಿಂಗಳಿನಿಂದ ನಿರಂತರ ಅತ್ಯಾಚಾರ ಎಸಗಲಾಗಿದೆ. ಬಾಲಕಿಯನ್ನ ಬೆದರಿಸಿ, ಪುಸಲಾಯಿಸಿ ದೊಡ್ಡಪ್ಪ ಲೈಂಗಿಕ ದೌರ್ಜನ್ಯ ನಡೆಸಿದ್ದಾನೆ.

ಹೊಟ್ಟೆನೋವಿಗೆ ಚಿಕಿತ್ಸೆ ಕೊಡಿಸಲು ಬಾಲಕಿಯನ್ನು ಹಲಗೂರು ಆಸ್ಪತ್ರೆಗೆ ಕರೆತಂದಾಗ ಪ್ರಕರಣ ಬೆಳಕಿಗೆ ಬಂದಿದೆ.

ADVERTISEMENT

ಚಿಕಿತ್ಸೆ ಸಂದರ್ಭದಲ್ಲಿ ಬಾಲಕಿ ಗರ್ಭಿಣಿಯಾಗಿರುವುದು ಗೊತ್ತಾಗಿದೆ. ಹೊಟ್ಟೆಯೊಳಗಿದ್ದ ಮಗು ಮೃತಪಟ್ಟಿದೆ. ಬಾಲಕಿಯನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿ ವಿರುದ್ಧ ಹಲಗೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.