ADVERTISEMENT

ಬಿಎಸ್‌ವೈ ವಿರುದ್ಧದ ಅರ್ಜಿ ಅಂತಿಮ ವಿಚಾರಣೆ ಜು.22ರಿಂದ

​ಪ್ರಜಾವಾಣಿ ವಾರ್ತೆ
Published 20 ಫೆಬ್ರುವರಿ 2017, 19:30 IST
Last Updated 20 ಫೆಬ್ರುವರಿ 2017, 19:30 IST

ನವದೆಹಲಿ: ಜಮೀನು ಡಿನೋಟಿಫಿಕೇಷನ್ ಪ್ರಕರಣದಲ್ಲಿ ಬಿ.ಎಸ್. ಯಡಿಯೂರಪ್ಪ ವಿರುದ್ಧ ಕ್ರಮ ಜರುಗಿಸಲು ರಾಜ್ಯಪಾಲರು ನೀಡಿದ್ದ ಅನುಮತಿಯನ್ನು ರದ್ದುಗೊಳಿಸಿದ ಕರ್ನಾಟಕ ಹೈಕೋರ್ಟ್‌ ಆದೇಶ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಯ ಅಂತಿಮ ವಿಚಾರಣೆಯನ್ನು ಸುಪ್ರೀಂ ಕೋರ್ಟ್‌ ಜುಲೈ 22ಕ್ಕೆ ನಿಗದಿ ಮಾಡಿದೆ.

ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿಗಳಾದ ಜೆ. ಚಲಮೇಶ್ವರ್ ಮತ್ತು ಎಸ್. ಅಬ್ದುಲ್ ನಜೀರ್ ಅವರು ಇರುವ ವಿಭಾಗೀಯ ಪೀಠ ನಡೆಸುತ್ತಿದೆ.

ಈ ಹಂತದಲ್ಲಿ ಯಾವುದೇ ಆದೇಶ ನೀಡಲಾಗದು ಎಂದು ಪೀಠ ಹೇಳಿತು. ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗಿದ್ದ ಅವಧಿಯಲ್ಲಿ ನಡೆದ ಕೆಲವು ಡಿನೋಟಿಫಿಕೇಷನ್ ಪ್ರಕರಣಗಳಲ್ಲಿ ಅವರ ವಿರುದ್ಧ ಕ್ರಮ ಜರುಗಿಸಲು ರಾಜ್ಯಪಾಲ ಎಚ್.ಆರ್. ಭಾರದ್ವಾಜ್ ಅವರು ಅನುಮತಿ ನೀಡಿದ್ದರು. ಇದನ್ನು ಹೈಕೋರ್ಟ್‌ ರದ್ದುಪಡಿಸಿತ್ತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.