ADVERTISEMENT

ಬಿಜೆಪಿಯವರದ್ದು ಬಾಯಿ ಬಡಾಯಿ, ಸಾಧನೆ ಶೂನ್ಯ: ಸಿದ್ದರಾಮಯ್ಯ

​ಪ್ರಜಾವಾಣಿ ವಾರ್ತೆ
Published 21 ಜುಲೈ 2017, 7:28 IST
Last Updated 21 ಜುಲೈ 2017, 7:28 IST
ಬಿಜೆಪಿಯವರದ್ದು ಬಾಯಿ ಬಡಾಯಿ, ಸಾಧನೆ ಶೂನ್ಯ: ಸಿದ್ದರಾಮಯ್ಯ
ಬಿಜೆಪಿಯವರದ್ದು ಬಾಯಿ ಬಡಾಯಿ, ಸಾಧನೆ ಶೂನ್ಯ: ಸಿದ್ದರಾಮಯ್ಯ   

ಬೆಂಗಳೂರು: ಚುನಾವಣೆ ಏಪ್ರಿಲ್ ತಿಂಗಳಿನಲ್ಲಿಯೇ ನಡೆಯಲಿದೆ. ಈ ಬಗ್ಗೆ ಯಾವುದೇ ಗೊಂದಲ ಬೇಡ.ಈ ವಿಚಾರವನ್ನು ಹೈಕಮಾಂಡ್‍ಗೂ ತಿಳಿಸಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಶುಕ್ರವಾರ ಕೆಪಿಸಿಸಿ ಕಚೇರಿಯಲ್ಲಿ ನಡೆದ ಪ್ರದೇಶ ಕಾಂಗ್ರೆಸ್ ಸಮಿತಿಯ ನೂತನ ಪದಾಧಿಕಾರಿಗಳ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು ನಾಲ್ಕು ವರ್ಷದಲ್ಲಿ ನಾವು ನುಡಿದಂತೆ ನಡೆದಿದ್ದೇವೆ. ಪ್ರಣಾಳಿಕೆಯಲ್ಲಿ ನೀಡಿದ್ದ ಭರವಸೆಗಳನ್ನು ಈಡೇರಿಸಿದ್ದೇವೆ ಎಂದಿದ್ದಾರೆ.

ಸಭೆಯಲ್ಲಿಎಐಸಿಸಿ ಪ್ರಧಾನ ಕಾರ್ಯದರ್ಶಿಗಳು, ಕಾರ್ಯದರ್ಶಿಗಳು, ಕೆಪಿಸಿಸಿ ಅಧ್ಯಕ್ಷರು, ಕಾರ್ಯಾಧ್ಯಕ್ಷರ ಉಪಸ್ಥಿತರಿದ್ದರು

ADVERTISEMENT

ಕೆಪಿಸಿಸಿ ಕಚೇರಿಯಲ್ಲಿ ಮುಖ್ಯಮಂತ್ರಿಗಳ ಭಾಷಣದ ಮುಖ್ಯಾಂಶಗಳು :

* ನೂತನವಾಗಿ ನೇಮಕಗೊಂಡಿರುವ ಎಲ್ಲ ಪದಾಧಿಕಾರಿಗಳಿಗೆ ಅಭಿನಂದನೆಗಳು.

* ಜವಾಬ್ದಾರಿ ನಿರ್ವಹಣೆಯಲ್ಲಿ ನಿಮಗೆ ಯಶಸ್ಸು ಸಿಗಲಿ ಎಂದು ಹಾರೈಸುತ್ತೇನೆ. ನೂತನ ಪದಾಧಿಕಾರಿಗಳನ್ನು ನೇಮಕ ಮಾಡಿದ ಹೈಕಮಾಂಡ್ ಗೆ ಅಭಿನಂದನೆಗಳು.

* ಇದು ಚುನಾವಣಾ ವರ್ಷ. ಹೀಗಾಗಿ ಪದಾಧಿಕಾರಿಗಳ ಮೇಲೆ ನಿರೀಕ್ಷೆ ಹೆಚ್ವಿದೆ. ನಮ್ಮ ಮುಂದೆ ಇರುವ ಸವಾಲು ಎಂದರೆ ಪಕ್ಷವನ್ನು ಬಲಪಡಿಸುವುದು, ಮತ್ತೆ ಅಧಿಕಾರಕ್ಕೆ ತರುವುದು.

*೨೦೧೩ರಲ್ಲಿ ಜನ ನಮಗೆ ಆಶೀರ್ವಾದ ಮಾಡಿದ್ದಾರೆ. ಅಧಿಕಾರಕ್ಕೆ ಬಂದು ನಾಲ್ಕು ವರ್ಷ ಕಳೆದಿದೆ. ಚುನಾವಣೆ ಮಾರ್ಚ್, ಏಪ್ರಿಲ್‌ ನಲ್ಲಿ ನಡೆಯಲಿದೆ.

* ಚುನಾವಣೆ ವಿಷಯದಲ್ಲಿ ಪ್ರತಿ ಪಕ್ಷಗಳು ಗೊಂದಲ ಸೃಷ್ಟಿ ಮಾಡುತ್ತಿವೆ. ರಾಜ್ಯಕ್ಕೆ ಬಂದಿರುವ ಎಐಸಿಸಿ ಪದಾಧಿಕಾರಿಗಳು ಉತ್ತಮವಾಗಿ ಕೆಲಸ ಮಾಡುತ್ತಿರುವುದು ಅವರಲ್ಲಿ ನಡುಕ ಉಂಟು ಮಾಡಿದೆ. ಅದಕ್ಕೆ ಗೊಂದಲ ಸೃಷ್ಟಿ ಮಾಡುವ ಪ್ರಯತ್ನ ನಡೆದಿದೆ.

* ಚುನಾವಣೆ ಏಪ್ರಿಲ್ ನಲ್ಲೇ ನಡೆಯಲಿದೆ. ಈ ಬಗ್ಗೆ ಯಾವುದೇ ಗೊಂದಲ ಬೇಡ. ಈ ವಿಚಾರವನ್ನು ಹೈಕಮಾಂಡ್ ಗೂ ತಿಳಿಸಿದ್ದೇವೆ.

* ನಾಲ್ಕು ವರ್ಷದಲ್ಲಿ ನಾವು ನುಡಿದಂತೆ ನಡೆದಿದ್ದೇವೆ. ಪ್ರಣಾಳಿಕೆಯಲ್ಲಿ ನೀಡಿದ್ದ ಭರವಸೆಗಳನ್ನು ಈಡೇರಿಸಿದ್ದೇವೆ.

* ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಾಧನೆ ಕುರಿತು ಬಹಿರಂಗ ಚರ್ಚೆಗೆ ಬನ್ನಿ ಎಂದು ಬಿಜೆಪಿಗೆ ಸವಾಲು ಹಾಕಿದ್ದೇನೆ. ಪದಾಧಿಕಾರಿಗಳು ಸಹ ಮನೆ ಮನೆಗೆ ಸರ್ಕಾರದ ಸಾಧನೆ ತಿಳಿಸಬೇಕು.

*ಬಿಜೆಪಿಯವರು ಕೆಲಸ ಮಾಡದೇ ಮಾತನಾಡುತ್ತಾರೆ. ನಾವು ಮಾಡಿರುವ ಕೆಲಸಗಳನ್ನು ಜನರಿಗೆ ತಿಳಿಸಬೇಕು. ಬಿಜೆಪಿಯವರದ್ದು ಬಾಯಿ ಬಡಾಯಿ, ಸಾಧನೆ ಶೂನ್ಯ.

* ಸರ್ಕಾರವನ್ನು ಟೀಕಿಸಲು ಬಿಜೆಪಿಯವರರಿಗೆ ಯಾವುದೇ ವಿಷಯಗಳಿಲ್ಲ. ಹೀಗಾಗಿ ಜಾತಿ, ಧರ್ಮದ ಹೆಸರಲ್ಲಿ ರಾಜಕೀಯ ಮಾಡಲು ಹೊರಟಿದ್ದಾರೆ. ಅದನ್ನು ತಡೆಯಲು ನಮ್ಮವರು ಸಜ್ಜಾಗಬೇಕು. ಇದು ಅತ್ಯಂತ ಅವಶ್ಯಕ.

* ನಾವು ಅಭಿವೃದ್ಧಿ ಕಾರ್ಯಗಳನ್ನು ಮುಂದಿಟ್ಟುಕೊಂಡು ಚುನಾವಣೆ ಎದುರಿಸೋಣ. ಹೇಳಿಕೊಳ್ಳಲು ಬಿಜೆಪಿಯವರು ಯಾವುದೇ ಸಾಧನೆ ಮಾಡಿಲ್ಲ. ಹೀಗಾಗಿ ಸರ್ಕಾರದ ಮೇಲೆ ಸುಳ್ಳು ಆರೋಪಗಳನ್ನು ಮಾಡುತ್ತಾರೆ.

* ಅಧಿಕಾರದಲ್ಲಿ ಇದ್ದಾಗ ದಲಿತರಿಗೆ ಬಿಜೆಪಿಯವರು ಏನೂ ಮಾಡಲಿಲ್ಲ. ಈಗ ದಲಿತರ ಮನೆಗೆ ಭೇಟಿ ನೀಡುವ ನಾಟಕ ಆಡುತ್ತಿದ್ದಾರೆ. ದಲಿತರ ಬಗ್ಗೆ ಬಿಜೆಪಿಯವರಿಗೆ ಕಾಳಜಿ ಇಲ್ಲ. ಸಾಮಾಜಿಕ ನ್ಯಾಯಕ್ಕೆ, ಜಾತ್ಯತೀತ ವಾದಕ್ಕೆ ಅವರು ಯಾವಾಗಲೂ ವಿರುದ್ಧ.  ಅದರಲ್ಲಿ ಬದ್ಧತೆ ಇರುವುದು ಕಾಂಗ್ರೆಸ್ ಗೆ ಮಾತ್ರ.

* ಇಂದಿರಾ ಕ್ಯಾಂಟೀನ್ ವಿಚಾರದಲ್ಲೂ ಬಿಜೆಪಿಯವರು ರಾಜಕಾರಣ ಮಾಡುತ್ತಿದ್ದಾರೆ. ಬಡವರಿಗಾಗಿ ಮಾಡಿರುವ ಯೋಜನೆ ವಿಚಾರದಲ್ಲೂ ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ.

*ಚುನಾವಣೆ ಸಮೀಪಿಸುತ್ತಿದ್ದಂತೆ ಬಿಜೆಪಿಯವರು ಸುಳ್ಳು ಆರೋಪಗಳನ್ನು ಹೆಚ್ಚಾಗಿ ಮಾಡುತ್ತಾರೆ. ನಮ್ಮವರು ಅದನ್ನು ದಿಟ್ಟವಾಗಿ ಎದುರಿಸಬೇಕು.

* ನಮ್ಮ ಕಾರ್ಯಕರ್ತರು ಎದೆ ಉಬ್ಬಿಸುವ ಕೆಲಸವನ್ನು ಸರ್ಕಾರ ಮಾಡಿದೆಯೇ ಹೊರತು ಎದೆಗುಂದುವ ಕಾರ್ಯ ಮಾಡಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.