ADVERTISEMENT

‘ಬಿಜೆಪಿ– ಬುರುಡೆ ಜನರ ಪಕ್ಷ’

​ಪ್ರಜಾವಾಣಿ ವಾರ್ತೆ
Published 23 ಮಾರ್ಚ್ 2018, 19:58 IST
Last Updated 23 ಮಾರ್ಚ್ 2018, 19:58 IST
ಎಸ್.ಟಿ.ಸೋಮಶೇಖರ್ ನೇತೃತ್ವದಲ್ಲಿ ಕಾಂಗ್ರೆಸ್‌ ಕಾರ್ಯಕರ್ತರು ಪಾದಯಾತ್ರೆ ನಡೆಸಿದರು
ಎಸ್.ಟಿ.ಸೋಮಶೇಖರ್ ನೇತೃತ್ವದಲ್ಲಿ ಕಾಂಗ್ರೆಸ್‌ ಕಾರ್ಯಕರ್ತರು ಪಾದಯಾತ್ರೆ ನಡೆಸಿದರು   

ಬೆಂಗಳೂರು: ‘ಬಿಜೆಪಿ ಎಂದರೆ ಬುರುಡೆ ಜನರ ಪಕ್ಷ’ ಎಂದು ಗೃಹ ಸಚಿವ ರಾಮಲಿಂಗಾರೆಡ್ದಿ ವ್ಯಂಗ್ಯವಾಡಿದರು.

ಕಾಂಗ್ರೆಸ್‌ ಪಕ್ಷದ ವತಿಯಿಂದ ಯಶವಂತಪುರ ವಿಧಾನಸಭಾ ಕ್ಷೇತ್ರದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ‘ನಮ್ಮ ಬೆಂಗಳೂರು, ನಮ್ಮ ಹೆಮ್ಮೆ’ ಪಾದಯಾತ್ರೆಯಲ್ಲಿ ಅವರು ಮಾತನಾಡಿದರು.

‘ಬೆಂಗಳೂರಿನಲ್ಲಿ ಕೊಲೆ ಮಾಡುವುದು ಸುಲಭ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳುತ್ತಾರೆ. ಇಲ್ಲಿ ಕಾನೂನು ಸುವ್ಯವಸ್ಥೆ ಸರಿಯಿಲ್ಲ, ವರದಿ ಕೊಡಿ ಎಂದು ಕೇಂದ್ರ ಗೃಹ ಸಚಿವ ರಾಜನಾಥ್‌ ಸಿಂಗ್‌ ಕೇಳುತ್ತಾರೆ. ಕೋಮುಗಲಭೆಗೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಪ್ರಚೋದನೆ ನೀಡುತ್ತಾರೆ. ಸುಳ್ಳು ಹೇಳುವುದಕ್ಕೆ ಪ್ರಶಸ್ತಿ ಇದ್ದರೆ ಅದನ್ನು ಪ್ರಧಾನಿಗೆ ಕೊಡಬೇಕು’ ವ್ಯಂಗ್ಯವಾಡಿದರು.

ADVERTISEMENT

‘ಚುನಾವಣೆ ಸಮಯದಲ್ಲಿ ಯಡಿಯೂರಪ್ಪ ಕೊಳೆಗೇರಿ ವಾಸ್ತವ್ಯ ಮಾಡುತ್ತಿದ್ದಾರೆ. ಅವರು ಅಧಿಕಾರದಲ್ಲಿದ್ದಾಗ ಕೊಳೆಗೇರಿಗಳ ನೆನಪು ಏಕೆ ಬರಲಿಲ್ಲ’ ಎಂದು ಪ್ರಶ್ನಿಸಿದರು.

ಶಾಸಕ ಎಸ್.ಟಿ.ಸೋಮಶೇಖರ್, ‘ಬಿಬಿಎಂಪಿಗೆ ಹೊಸದಾಗಿ ಸೇರ್ಪಡೆಗೊಂಡ 110 ಹಳ್ಳಿಗಳ ಪೈಕಿ 23 ಹಳ್ಳಿಗಳು ಯಶವಂತಪುರ ಕ್ಷೇತ್ರಕ್ಕೆ ಸೇರುತ್ತವೆ. ಇಲ್ಲಿ ಕುಡಿಯುವ ನೀರಿನ ವ್ಯವಸ್ಥೆ, ಒಳಚರಂಡಿ, ರಸ್ತೆ, ರಾಜಕಾಲುವೆ ನಿರ್ಮಾಣ ಮಾಡಲಾಗುತ್ತಿದೆ’ ಎಂದರು.

ವಿಧಾನ ಪರಿಷತ್ ಸದಸ್ಯ ಎಂ.ನಾರಾಯಣಸ್ವಾಮಿ, ‘ಆರ್.ಅಶೋಕ್ ಸೇರಿದಂತೆ ಬಿಜೆಪಿಯ ಅನೇಕ ಶಾಸಕರು ಬೇನಾಮಿ ಹೆಸರಿನಲ್ಲಿ ಅಕ್ರಮ ಆಸ್ತಿ ಮಾಡಿದ್ದಾರೆ’ ಎಂದು ಆರೋಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.