ADVERTISEMENT

ಬೀಳಗಿಯಲ್ಲಿ ಮೊಸಳೆ ರಕ್ಷಣೆ

​ಪ್ರಜಾವಾಣಿ ವಾರ್ತೆ
Published 17 ಮೇ 2017, 13:34 IST
Last Updated 17 ಮೇ 2017, 13:34 IST
ಬೀಳಗಿಯಲ್ಲಿ ಮೊಸಳೆ ರಕ್ಷಣೆ
ಬೀಳಗಿಯಲ್ಲಿ ಮೊಸಳೆ ರಕ್ಷಣೆ   

ಬಾಗಲಕೋಟೆ: ತೀವ್ರ ಬರದ ಸಮಸ್ಯೆಯಿಂದಾಗಿ ಕೃಷ್ಣಾ ನದಿಯಲ್ಲಿ ನೀರು ಖಾಲಿಯಾದ ಕಾರಣ ಹತ್ತಿರದ ಹಳ್ಳಿಯ ದೇವಾಲಯವೊಂದರಲ್ಲಿ ಆಶ್ರಯ ಪಡೆದಿದ್ದ ಮೊಸಳೆಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಬುಧವಾರ ರಕ್ಷಿಸಿದ್ದಾರೆ.

ಜಿಲ್ಲೆಯ ಬೀಳಗಿ ತಾಲ್ಲೂಕಿನ ಸೊನ್ನ ಗ್ರಾಮದ ಹನುಮಂತ ದೇವರ ಗುಡಿಯಲ್ಲಿ ಮೊಸಳೆ ಆಶ್ರಯ ಪಡೆದಿತ್ತು. ಇದನ್ನು ಗಮನಿಸಿದ ಗ್ರಾಮಸ್ಥರು ಆತಂಕ ಗೊಂಡಿದ್ದರು. ನಂತರ ಅರಣ್ಯ ಇಲಾಖೆಗೆ ವಿಷಯ ತಿಳಿಸಿದ್ದಾರೆ. 

ತಕ್ಷಣ ಸ್ಥಳಕ್ಕಾಗಮಿಸಿದ ಸಿಬ್ಬಂದಿ ಗ್ರಾಮಸ್ಥರ ನೆರವಿನಿಂದ ಮೊಸಳೆಯನ್ನು ರಕ್ಷಿಸಿದ್ದಾರೆ. ಇದೇ ವೇಳೆ ಸಮೀಪದ ಕೊರ್ತಿ ಗ್ರಾಮದಲ್ಲಿಯೂ ಮತ್ತೊಂದು ಮೊಸಳೆ ಕಾಣಿಸಿಕೊಂಡಿದ್ದು, ಅದನ್ನು ಸಹ ರಕ್ಷಿಸಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.