ADVERTISEMENT

ಮಂಗಳಮುಖಿಯರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಲು ಚಿಂತನೆ: ಆಂಜನೇಯ

​ಪ್ರಜಾವಾಣಿ ವಾರ್ತೆ
Published 27 ಮಾರ್ಚ್ 2017, 19:35 IST
Last Updated 27 ಮಾರ್ಚ್ 2017, 19:35 IST
ಮಂಗಳಮುಖಿಯರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಲು ಚಿಂತನೆ: ಆಂಜನೇಯ
ಮಂಗಳಮುಖಿಯರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಲು ಚಿಂತನೆ: ಆಂಜನೇಯ   

ಬೆಂಗಳೂರು: ‘ಮಂಗಳಮುಖಿಯರು ಭಿಕ್ಷೆ ಬೇಡುವುದನ್ನು ತಪ್ಪಿಸಿ, ಅವರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸುವ ಬಗ್ಗೆ ಚಿಂತಿಸಲಾಗುತ್ತಿದೆ’ ಎಂದು ಸಮಾಜ ಕಲ್ಯಾಣ ಸಚಿವ ಎಚ್‌. ಆಂಜನೇಯ ಹೇಳಿದರು.

ವಿಧಾನ ಪರಿಷತ್ತಿನಲ್ಲಿ ಕಾಂಗ್ರೆಸ್‌ನ ಆರ್‌. ಧರ್ಮಸೇನ ಮತ್ತು ಕೆ.ಸಿ. ಕೊಂಡಯ್ಯ ಪ್ರಶ್ನೆಗೆ ಸಚಿವರು ಉತ್ತರಿಸಿದರು.

‘ಸಿಗ್ನಲ್‌, ಟೋಲ್‌ಗಳಲ್ಲಿ ಭಿಕ್ಷೆ ಬೇಡುವ ಮಂಗಳಮುಖಿಯರನ್ನು ಬಂಧಿಸಿ ಎಲ್ಲಿಗೆ ಕರೆದೊಯ್ಯಬೇಕು ಎಂಬುದು ಪ್ರಶ್ನೆ. ಅವರ ಪುನರ್ವಸತಿಗೆ ಸರ್ಕಾರದಲ್ಲಿ ಯಾವುದೇ ವ್ಯವಸ್ಥೆ ಇಲ್ಲ. ನೀವು ಬಂಧಿಸಲು ಮುಂದಾದರೆ ನಾವು ಸಾರ್ವಜನಿಕ ಸ್ಥಳದಲ್ಲಿ ನಗ್ನರಾಗುತ್ತೇವೆ’ ಎಂದು ಬೆದರಿಕೆ ಹಾಕಿದ್ದಾರೆ. ಅವರನ್ನು ಬಂಧಿಸುವುದು ಕಷ್ಟದ ಕೆಲಸ’ ಎಂದು ಸಚಿವರು ಹೇಳಿದರು.

ADVERTISEMENT

ಭಿಕ್ಷಾಟನೆ ತಪ್ಪಿಸಿ ಗಾರ್ಮೆಂಟ್ಸ್‌ಗಳಲ್ಲಿ ನೌಕರಿ ಅಥವಾ ಸ್ವಯಂ ಉದ್ಯೋಗ ಕೈಗೊಳ್ಳಲು ಸೂಕ್ತ ತರಬೇತಿ ನೀಡಬೇಕು. ಈ ಸಂಬಂಧ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ವಿವಿಧ ಸಂಘ ಸಂಸ್ಥೆಗಳೊಂದಿಗೆ ಚರ್ಚಿಸಿ ಸರ್ಕಾರ ಸೂಕ್ತ ನಿರ್ಧಾರ ಕೈಗೊಳ್ಳಲಿದೆ ಎಂದು ಭರವಸೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.