ADVERTISEMENT

ಮಡೆಸ್ನಾನ: ವಿಚಾರಣೆಗೆ ಸುಪ್ರೀಂ ಕೋರ್ಟ್‌ ಸಮ್ಮತಿ

​ಪ್ರಜಾವಾಣಿ ವಾರ್ತೆ
Published 24 ಮಾರ್ಚ್ 2017, 19:56 IST
Last Updated 24 ಮಾರ್ಚ್ 2017, 19:56 IST
ಮಡೆಸ್ನಾನ: ವಿಚಾರಣೆಗೆ ಸುಪ್ರೀಂ ಕೋರ್ಟ್‌ ಸಮ್ಮತಿ
ಮಡೆಸ್ನಾನ: ವಿಚಾರಣೆಗೆ ಸುಪ್ರೀಂ ಕೋರ್ಟ್‌ ಸಮ್ಮತಿ   

ನವದೆಹಲಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಲೆ ಕುಡಿಯ ಸಮುದಾಯ ಆಚರಿಸುವ ‘ಮಡೆ ಸ್ನಾನ’ಕ್ಕೆ ನೀಡಿರುವ ತಡೆಯಾಜ್ಞೆಯನ್ನು ಮುಂದುವರಿಸಲು ಸುಪ್ರೀಂಕೋರ್ಟ್‌ ನಿರ್ಧರಿಸಿದೆ.

ಶುಕ್ರವಾರ ಪ್ರಕರಣದ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಜೆ.ಎಸ್‌. ಖೇಹರ್‌ ಅವರನ್ನು ಒಳಗೊಂಡ ತ್ರಿಸದಸ್ಯ ಪೀಠ, ಆಚರಣೆಯನ್ನು ವಿರೋಧಿಸಿ ಕರ್ನಾಟಕ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆಗೆ ಎತ್ತಿಕೊಳ್ಳಲು ಒಪ್ಪಿಗೆ ನೀಡಿತಲ್ಲದೆ, ಈ ಆಚರಣೆಯ ಕಾನೂನು ಸಿಂಧುತ್ವದ ಕುರಿತು ಅಂತಿಮ ನಿರ್ಧಾರ ಕೈಗೊಳ್ಳುವವರೆಗೂ ತಡೆಯಾಜ್ಞೆ ಮುಂದುವರಿಯಲಿದೆ ಎಂದು ಹೇಳಿತು.

ಸರ್ಕಾರ ಮಡೆ ಸ್ನಾನ ನಿಷೇಧಿಸಿದ್ದನ್ನು ಪ್ರಶ್ನಿಸಿ ಆದಿವಾಸಿ ಬುಡಕಟ್ಟು ಹಿತರಕ್ಷಣಾ ಸಮಿತಿ ಸಲ್ಲಿಸಿದ್ದ ಅರ್ಜಿ ಯ ವಿಚಾರಣೆ ನಡೆಸಿದ್ದ ರಾಜ್ಯ ಹೈಕೋರ್ಟ್‌, ಮಡೆಸ್ನಾನ ಆಚರಣೆಗೆ ಅವಕಾಶ ಕಲ್ಪಿಸಿತ್ತು. ಆದರೆ, ಹೈಕೋರ್ಟ್‌ ನೀಡಿದ್ದ ಆದೇಶಕ್ಕೆ 2014ರ ಡಿಸೆಂಬರ್‌ 12ರಂದು ಸುಪ್ರೀಂ ಕೋರ್ಟ್‌ ತಡೆ ನೀಡಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.