ADVERTISEMENT

ಮಣ್ಣು ಕುಸಿದು ಬಸ್ ಪಲ್ಟಿ: 30ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

​ಪ್ರಜಾವಾಣಿ ವಾರ್ತೆ
Published 20 ಜುಲೈ 2017, 7:22 IST
Last Updated 20 ಜುಲೈ 2017, 7:22 IST
ಮಣ್ಣು ಕುಸಿದು ಬಸ್ ಪಲ್ಟಿ: 30ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ
ಮಣ್ಣು ಕುಸಿದು ಬಸ್ ಪಲ್ಟಿ: 30ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ   

ಶಿರಸಿ: ಬಸ್ ಪಲ್ಟಿ ಹೊಡೆದ ಪರಿಣಾಮ 4 ವರ್ಷದ ಮಗು ಸೇರಿ 30ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ.

ತಾಲ್ಲೂಕಿನ ದೊಡ್ನಳ್ಳಿ ಗ್ರಾಮದ ಬಳಿ ಅಪಘಾತ ಸಂಭವಿಸಿದೆ. ಬೈಕ್‌ಗೆ ದಾರಿ ಕೊಡುವಾಗ ಅಪಘಾತ ಸಂಭವಿಸಿತು ಎಂದು ಪ್ರತ್ಯಕ್ಷ ದರ್ಶಿಗಳು ತಿಳಿಸಿದ್ದಾರೆ.

ಭಾರಿ ಮಳೆಯಿಂದಾಗಿ ಭೂಮಿ ಸಡಿಲಗೊಂಡಿದ್ದು, ರಸ್ತೆಯ ಪಕ್ಕದಲ್ಲಿ ಚಲಿಸಿದ ಬಸ್ ಮಣ್ಣು ಕುಸಿತದಿಂದಾಗಿ ಪಲ್ಟಿಯಾಗಿದೆ. ಅಪಘಾತದಲ್ಲಿ ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ADVERTISEMENT

ಶಿಗ್ಗಾವಿಯಲ್ಲಿ ಶಾಲಾ ಬಸ್‌ ಅಪಾಘಾತ
ಶಿಗ್ಗಾವಿ:
ಇಲ್ಲಿನ ಬಂಕಾಪುರ ಮತ್ತು ಮಾಸನಕಟ್ಟಿ ಸಮೀಪ ಶಾಲಾ ಬಸ್ ಮತ್ತು ಪ್ರಯಾಣಿಕರ ಬಸ್ ಡಿಕ್ಕಿ ಸಂಭವಿಸಿದೆ.

10 ಮಕ್ಕಳು ಸೇರಿದಂತೆ 30 ಮಂದಿ ಗಾಯಗೊಂಡಿದ್ದಾರೆ.  ಇಬ್ಬರನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಹಾಗೂ 6 ಮಂದಿ ಶಿಗ್ಗಾವಿ ತಾಲ್ಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.  ಉಳಿದ ಗಾಯಾಳುಗಳಿಗೆ ಬಂಕಾಪುರದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.