ADVERTISEMENT

ಮರಕ್ಕೆ ಬಸ್‌ ಡಿಕ್ಕಿ ಇಬ್ಬರ ಸಾವು

​ಪ್ರಜಾವಾಣಿ ವಾರ್ತೆ
Published 27 ಮೇ 2016, 20:14 IST
Last Updated 27 ಮೇ 2016, 20:14 IST

ಶಿರಾಳಕೊಪ್ಪ (ಶಿವಮೊಗ್ಗ ಜಿಲ್ಲೆ):  ರಾಣೆಬೆನ್ನೂರಿನಿಂದ ಮಣಿಪಾಲಕ್ಕೆ ಹೊರಟಿದ್ದ ಖಾಸಗಿ ಬಸ್ಸೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬಾಲಕ ಸೇರಿ ಇಬ್ಬರು ಮೃತಪಟ್ಟ ಘಟನೆ ಶುಕ್ರವಾರ ರಾತ್ರಿ ಶಿರಾಳಕೊಪ್ಪದ ಮಂಚಿಕೊಪ್ಪ ಕ್ರಾಸ್‌ ಬಳಿ ನಡೆದಿದೆ.

ಗುರುಕಿರಣ್‌ (14) ಮೃತಪಟ್ಟ ಬಾಲಕ ಎಂದು ಗುರುತಿಸಲಾಗಿದೆ. ಇನ್ನೊಬ್ಬರ ಗುರುತು ಪತ್ತೆಯಾಗಿಲ್ಲ.
ಸುಗಮ ಹೆಸರಿನ ಬಸ್‌ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.