ADVERTISEMENT

ಮಹಾದಾಯಿ: ಮಧ್ಯಂತರ ಅರ್ಜಿಗೆ ನಾರಿಮನ್‌ ವಿರೋಧ

​ಪ್ರಜಾವಾಣಿ ವಾರ್ತೆ
Published 8 ಅಕ್ಟೋಬರ್ 2015, 19:30 IST
Last Updated 8 ಅಕ್ಟೋಬರ್ 2015, 19:30 IST

ಬೆಂಗಳೂರು: ಮಹಾದಾಯಿ ವಿವಾದಕ್ಕೆ ಸಂಬಂಧಿಸಿದಂತೆ ನ್ಯಾಯಮಂಡಳಿಗೆ ಮಧ್ಯಂತರ ಅರ್ಜಿ ಸಲ್ಲಿಸಲು ವಕೀಲ ನಾರಿಮನ್‌ ವಿರೋಧ ವ್ಯಕ್ತಪಡಿಸಿದ್ದಾರೆ.

ಹೀಗಾಗಿ ಮುಖ್ಯಮಂತ್ರಿ  ಅವರು ಗುರುವಾರ ಹಿರಿಯ ಸಚಿವರೊಂದಿಗೆ ತುರ್ತು ಸಭೆ ನಡೆಸಿ ಅ.17ರ ಮಧ್ಯಾಹ್ನ 3ಕ್ಕೆ ಸರ್ವ ಪಕ್ಷಗಳ ಸಭೆ ನಡೆಸಲು ನಿರ್ಧರಿಸಿದ್ದಾರೆ.

ಈ ಮೊದಲು ನಾರಿಮನ್‌ ಅವರು ಮಧ್ಯಂತರ ಅರ್ಜಿ ಸಲ್ಲಿಸಲು ಒಪ್ಪಿಗೆ ನೀಡಿದ್ದರು. ಈಗ ತಿರಸ್ಕರಿಸಿರುವುದರಿಂದ  ರಾಜ್ಯ ಸರ್ಕಾರ ಮುಜುಗರ ಅನುಭವಿಸಬೇಕಾಗಿದೆ ಎಂದು ನೀರಾವರಿ ಸಚಿವ ಎಂ.ಬಿ.ಪಾಟೀಲ ಸಭೆಯಲ್ಲಿ ಹೇಳಿದರು ಎನ್ನಲಾಗಿದೆ.

ಮತ್ತೊಮ್ಮೆ ನಾರಿಮನ್‌ ಅವರನ್ನು ಭೇಟಿ ಮಾಡಲು ಸಚಿವರಿಗೆ ಮುಖ್ಯಮಂತ್ರಿ ಸೂಚಿಸಿದರು ಎಂದು ಮೂಲಗಳು ಹೇಳಿವೆ. ಸಚಿವರಾದ ಎಚ್‌.ಕೆ.ಪಾಟೀಲ, ಟಿ.ಬಿ.ಜಯಚಂದ್ರ ಅವರೂ ಸಭೆಯಲ್ಲಿ ಭಾಗಿಯಾಗಿದ್ದರು. ವಕೀಲ ಮೋಹನ್‌ ಕಾತರಕಿ ಮತ್ತು ಹಿರಿಯ ಅಧಿಕಾರಿಗಳು ಸಭೆಯಲ್ಲಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.