ADVERTISEMENT

‘ಮಹಿಳೆಯರ ಮೇಲಿನ ದೌರ್ಜನ್ಯ ತಡೆಯುವಲ್ಲಿ ವಿಫಲ’

​ಪ್ರಜಾವಾಣಿ ವಾರ್ತೆ
Published 23 ನವೆಂಬರ್ 2017, 19:30 IST
Last Updated 23 ನವೆಂಬರ್ 2017, 19:30 IST

ತುಮಕೂರು: ‘ರಾಜ್ಯದಲ್ಲಿ ಸಿದ್ಧ ಉಡುಪು ತಯಾರಿಕಾ ಘಟಕಗಳು (ಗಾರ್ಮೆಂಟ್ಸ್) ಸೇರಿ ಇನ್ನಿತರ ಕೈಗಾರಿಕೆಗಳಲ್ಲಿ ಕೆಲಸ ಮಾಡುವ ಮಹಿಳೆಯರು ದೌರ್ಜನ್ಯ, ಲೈಂಗಿಕ ಕಿರುಕುಳಕ್ಕೆ ಒಳಗಾಗುತ್ತಿದ್ದಾರೆ. ಇದನ್ನು ನಿಯಂತ್ರಿಸುವಲ್ಲಿ ರಾಜ್ಯ ಕಾರ್ಮಿಕ ಇಲಾಖೆ ಸಂಪೂರ್ಣ ವಿಫಲವಾಗಿದೆ’ ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿಬಾಯಿ ಅಸಮಾಧಾನ ವ್ಯಕ್ತಪಡಿಸಿದರು.

ಗುರುವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಹಿಳಾ ದೌರ್ಜನ್ಯ ಕುರಿತು ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು,’ಕೈಗಾರಿಕೆಗಳಲ್ಲಿ ಲೈಂಗಿಕ ದೌರ್ಜನ್ಯ ನಿಯಂತ್ರಣ ಸಮಿತಿ ಇರಬೇಕು. ಕೆಲ ಕಡೆ ಈ ಸಮಿತಿಗಳೇ ಇಲ್ಲ. ಮತ್ತೊಂದೆಡೆ ಸಮಿತಿಗಳಿದ್ದರೂ ಅವು ಸರಿಯಾಗಿ ಕೆಲಸ ಮಾಡುತ್ತಿಲ್ಲ. ಕೈಗಾರಿಕೆಗಳಲ್ಲಿ ಕಾರ್ಮಿಕ ಇಲಾಖೆ ದೂರು ಪೆಟ್ಟಿಗೆ ಹಾಕಬೇಕು. ಆ ಪೆಟ್ಟಿಗೆಗಳನ್ನೇ ಹಾಕಿಲ್ಲ’ ಎಂದು ಕಿಡಿಕಾರಿದರು.

‘ಲೈಂಗಿಕ ದೌರ್ಜನ್ಯಕ್ಕೊಳಗಾದ ಮಹಿಳೆಯರು ದೂರು ನೀಡಲು ಮುಂದೆ ಬರುತ್ತಿಲ್ಲ. ಕೆಲಸ ಕಳೆದುಕೊಳ್ಳುವ ಭಯದಿಂದ ದೌರ್ಜನ್ಯ ಸಹಿಸಿಕೊಂಡು ಕೆಲಸ ಮಾಡುತ್ತಿದ್ದಾರೆ’ ಎಂದು ಹೇಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.