ADVERTISEMENT

ಮಾಂಸ ಸೇವನೆಗೆ ವಿರೋಧವಿಲ್ಲ ಮಾದಾರ ಪೀಠದ ಸ್ವಾಮೀಜಿ ಸ್ಪಷ್ಟನೆ

​ಪ್ರಜಾವಾಣಿ ವಾರ್ತೆ
Published 19 ಜುಲೈ 2017, 19:35 IST
Last Updated 19 ಜುಲೈ 2017, 19:35 IST
ಚಿತ್ರದುರ್ಗದ ಮಾದಾರ ಪೀಠದ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿಯ ಪೀಠಾರೋಹಣದ 15ನೇ ವಾರ್ಷಿಕೋತ್ಸವದ ಅಂಗವಾಗಿ ಬುಧವಾರ ಹುಬ್ಬಳ್ಳಿಯಲ್ಲಿ ಆಯೋಜಿಸಲಾಗಿದ್ದ ಸಮಾರಂಭದಲ್ಲಿ ಶ್ರೀಗಳನ್ನು ಗೌರವಿಸಲಾಯಿತು. ವಿಧಾನ ಪರಿಷತ್‌ ಸದಸ್ಯ ಆರ್‌.ಬಿ. ತಿಮ್ಮಾಪುರ, ವಿಧಾನಸಭೆ ವಿರೋಧ ಪಕ್ಷದ ನಾಯಕ ಜಗದೀಶ ಶೆಟ್ಟರ್‌, ಶಾಸಕ ಗೋವಿಂದ ಕಾರಜೋಳ ಇದ್ದರು
ಚಿತ್ರದುರ್ಗದ ಮಾದಾರ ಪೀಠದ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿಯ ಪೀಠಾರೋಹಣದ 15ನೇ ವಾರ್ಷಿಕೋತ್ಸವದ ಅಂಗವಾಗಿ ಬುಧವಾರ ಹುಬ್ಬಳ್ಳಿಯಲ್ಲಿ ಆಯೋಜಿಸಲಾಗಿದ್ದ ಸಮಾರಂಭದಲ್ಲಿ ಶ್ರೀಗಳನ್ನು ಗೌರವಿಸಲಾಯಿತು. ವಿಧಾನ ಪರಿಷತ್‌ ಸದಸ್ಯ ಆರ್‌.ಬಿ. ತಿಮ್ಮಾಪುರ, ವಿಧಾನಸಭೆ ವಿರೋಧ ಪಕ್ಷದ ನಾಯಕ ಜಗದೀಶ ಶೆಟ್ಟರ್‌, ಶಾಸಕ ಗೋವಿಂದ ಕಾರಜೋಳ ಇದ್ದರು   

ಹುಬ್ಬಳ್ಳಿ: ‘ರಾಜ್ಯದಲ್ಲಿ ಉನ್ನತ ಹುದ್ದೆಗಳನ್ನು ಪಡೆಯಬೇಕಾದ ಸಂದರ್ಭದಲ್ಲಿ ನಮ್ಮ ಸಮಾಜದ ಬಾಂಧವರಿಗೆ ಅನೇಕ ಸಲ ಅನ್ಯಾಯವಾಗಿದೆ. ಆಗ ನಮ್ಮವರೇ ಧ್ವನಿ ಎತ್ತುವುದಿಲ್ಲ’ ಎಂದು ಚಿತ್ರದುರ್ಗದ ಮಾದಾರ ಗುರುಪೀಠದ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ ಬೇಸರ ವ್ಯಕ್ತಪಡಿಸಿದರು.

ಸ್ವಾಮೀಜಿಯ ಪೀಠಾರೋಹಣದ 15ನೇ ವಾರ್ಷಿಕೋತ್ಸವದ ಅಂಗವಾಗಿ ಬುಧವಾರ ನಗರದಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ಅಭಿನಂದನೆ ಸ್ವೀಕರಿಸಿ ಅವರು ಮಾತನಾಡಿದರು.

‘ರಾಜಕೀಯವಾಗಿ ನಮ್ಮ ಸಮಾಜದವರು ಮುಂದೆ ಬಂದರೆ ಹೆಚ್ಚು ಸ್ಥಾನಮಾನ ಪಡೆಯಲು ಸಾಧ್ಯ. ಆದ್ದರಿಂದ ಮುಂದಿನ ಚುನಾವಣೆಯಲ್ಲಿ ಮಾದಾರ ಸಮಾಜದ ಕನಿಷ್ಠ 15 ಜನರನ್ನು ಶಾಸಕರನ್ನಾಗಿ ಆಯ್ಕೆ ಮಾಡಬೇಕು’ ಎಂದರು.

ADVERTISEMENT

ಮಾಂಸ ಸೇವನೆಗೆ ವಿರೋಧವಿಲ್ಲ: ವಿಧಾನ ಪರಿಷತ್‌ ಸದಸ್ಯ ಆರ್‌.ಬಿ. ತಿಮ್ಮಾಪುರ ಮಾತನಾಡಿ ‘ಮಾಂಸಾಹಾರ ಸೇವನೆ ಮಾಡುವವರ ಮೇಲೆ ಹೆಚ್ಚು ದೌರ್ಜನ್ಯ ನಡೆಯುತ್ತಿದೆ. ಜನರ ಆಹಾರ ಸೇವನೆ ಬಗ್ಗೆ ಮಠಾಧೀಶರು ತಮ್ಮ ನಿಲುವು ಸ್ಪಷ್ಟಪಡಿಸಬೇಕು’ ಎಂದು ಆಗ್ರಹಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಸ್ವಾಮೀಜಿ ‘ಮಾಂಸ ಸೇವನೆ ಮಾಡುವುದಕ್ಕೆ ನನ್ನ ವಿರೋಧವಿಲ್ಲ. ಇದರ ಬಗ್ಗೆ ಅವರವರೇ ನಿರ್ಧರಿಸಬೇಕು. ಪ್ರಾಣಿ ಹಿಂಸೆಯನ್ನು ಆದಷ್ಟು ಕಡಿಮೆ ಮಾಡಿ’ ಎಂದರು.

ಪ್ರೊ. ಎಚ್‌. ಲಿಂಗಪ್ಪ ಅವರು ಸಂಪಾದಿಸಿದ, ಬಸವಮೂರ್ತಿ ಮಾದಾರ ಚನ್ನಯ್ಯ ಅವರ ಕುರಿತಾದ ಲೇಖನಗಳ ಸಂಗ್ರಹ ‘ಮೈತ್ರಿ ಭಾವದ ಬೆಳಕು’ ಗ್ರಂಥವನ್ನು ಇದೇ ವೇಳೆ ಬಿಡುಗಡೆ ಮಾಡಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.