ADVERTISEMENT

ಮುಕ್ತ ವಿ.ವಿ ಮುಚ್ಚಿದರೆ ಹೊಸ ವಿ.ವಿ ಆರಂಭ: ಸಚಿವ ರಾಯರಡ್ಡಿ ಹೇಳಿಕೆ

​ಪ್ರಜಾವಾಣಿ ವಾರ್ತೆ
Published 9 ಅಕ್ಟೋಬರ್ 2017, 19:30 IST
Last Updated 9 ಅಕ್ಟೋಬರ್ 2017, 19:30 IST
ಬಸವರಾಜ ರಾಯರಡ್ಡಿ
ಬಸವರಾಜ ರಾಯರಡ್ಡಿ   

ಬೆಂಗಳೂರು: ‘ಕರ್ನಾಟಕ ಮುಕ್ತ ವಿಶ್ವವಿದ್ಯಾಲಯ ಮುಚ್ಚುವುದು ಅನಿವಾರ್ಯವಾದರೆ ಅದೇ ಮಾದರಿಯ ಹೊಸ ವಿಶ್ವವಿದ್ಯಾಲಯ ಆರಂಭಿಸಬೇಕಾಗುತ್ತದೆ’ ಎಂದು ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರಡ್ಡಿ ಅವರು ಪ್ರತಿಪಾದಿಸಿದರು.

ಸೋಮವಾರ ಮಾಧ್ಯಮಗೋಷ್ಠಿಯಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ವಿಶ್ವವಿದ್ಯಾಲಯ ಮುಚ್ಚುವ ಪರಿಸ್ಥಿತಿ ಸದ್ಯ ಬಂದಿಲ್ಲ. ಅಂತಹ ಆಲೋಚನೆಯೂ ಸರ್ಕಾರದ ಮುಂದಿಲ್ಲ. ಅದನ್ನು ಉಳಿಸಿಕೊಳ್ಳಲು ಸರ್ಕಾರ ಎಲ್ಲ ರೀತಿ ಪ್ರಯತ್ನ ಮಾಡಲಿದೆ ಎಂದೂ ಅವರು ಹೇಳಿದರು.

ವಿಶ್ವವಿದ್ಯಾಲಯದ ಸುಧಾರಣೆ, ಉಳಿಸಿಕೊಳ್ಳಲು ಏನು ಮಾಡಬೇಕು ಎಂಬ ಬಗ್ಗೆ ಅಧ್ಯಯನ ನಡೆಸಿ ವರದಿ ನೀಡಲು ಹೆಚ್ಚುವರಿ ಮುಖ್ಯಕಾರ್ಯದರ್ಶಿ ಕೆ. ರತ್ನಪ್ರಭಾ ಅಧ್ಯಕ್ಷತೆಯಲ್ಲಿ ವ್ಹಿ.ಬಿ. ಕುಟಿನ್ಹೊ, ಬಿ.ಕೆ.ರವಿ, ಎಸ್‌.ಎ. ಕೋರಿ ಸದಸ್ಯರಾಗಿರುವ ಸಮಿತಿ ರಚಿಸಿ, ನವೆಂಬರ್ 15ರೊಳಗೆ ವರದಿ ನೀಡುವಂತೆ ಸೂಚಿಸಲಾಗಿದೆ. ಸಮಿತಿ ನೀಡಲಿರುವ ವರದಿ ಆಧರಿಸಿ ಸರ್ಕಾರ ಮುಂದಿನ ಹೆಜ್ಜೆ ಇಡಲಿದೆ ಎಂದರು.

ADVERTISEMENT

ಜಾವಡೇಕರ್‌ ನಿರ್ಲಕ್ಷ್ಯ: ‘ಸುಪ್ರೀಂ ಕೋರ್ಟ್ ನಿರ್ದೇಶನದ ಮೇರೆಗೆ ವಿ.ವಿ ತನ್ನ ಚಟುವಟಿಕೆ ಹಾಗೂ ವ್ಯಾಪ್ತಿಯಲ್ಲಿ ಬದಲಾವಣೆ ಮಾಡಿಕೊಂಡಿದೆ. ಹೀಗಿದ್ದರೂ ಕೇಂದ್ರ ಮರು ಮಾನ್ಯತೆ ಕೊಡಿಸಲು ಮನಸ್ಸು ಮಾಡುತ್ತಿಲ್ಲ.

ಗುಲಬರ್ಗ ವಿಶ್ವವಿದ್ಯಾಲಯಕ್ಕೆ ಬಸವೇಶ್ವರರ ಹೆಸರು ನಾಮಕರಣಕ್ಕೆ ಚಿಂತನೆ

ಗುಲಬರ್ಗ ವಿಶ್ವವಿದ್ಯಾಲಯಕ್ಕೆ ಬಸವೇಶ್ವರರ ಹೆಸರು ಇಡಲು ಸರ್ಕಾರ ಚಿಂತನೆ ನಡೆಸಿದೆ ಎಂದು ಸಚಿವ ರಾಯರಡ್ಡಿ ಹೇಳಿದರು.

ಕಲಬುರ್ಗಿ ಜಿಲ್ಲೆಯಲ್ಲಿ ಎರಡು ವಿಶ್ವವಿದ್ಯಾಲಯಗಳು ಇವೆ. ಕೇಂದ್ರೀಯ ವಿಶ್ವವಿದ್ಯಾಲಯಕ್ಕೆ ಡಾ.ಬಿ.ಆರ್. ಅಂಬೇಡ್ಕರ್ ಹೆಸರನ್ನಿಡುವಂತೆ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಇದಕ್ಕಾಗಿ ಸರ್ಕಾರ ಅನುದಾನ ನೀಡಬೇಕಿಲ್ಲ, ಹೆಚ್ಚಿನ ಖರ್ಚೂ ಬರುವುದಿಲ್ಲ. ಹಾಗಿದ್ದರೂ ಕೇಂದ್ರ ಸರ್ಕಾರ ಆಸಕ್ತಿ ತೋರಿಸುತ್ತಿಲ್ಲ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.