ADVERTISEMENT

ಮುನಿರಾಬಾದ್‌ನಿಂದ ಬೆಂಗಳೂರಿಗೆ ಕಾಲ್ನಡಿಗೆ ಜಾಥಾ: ಕಾರ್ಮಿಕ ಮುಖಂಡ ಮಾನಸಯ್ಯ ಬಂಧನ

​ಪ್ರಜಾವಾಣಿ ವಾರ್ತೆ
Published 13 ಏಪ್ರಿಲ್ 2017, 11:47 IST
Last Updated 13 ಏಪ್ರಿಲ್ 2017, 11:47 IST
ಮಾನಸಯ್ಯ
ಮಾನಸಯ್ಯ   

ರಾಯಚೂರು: ತುಂಗಭದ್ರಾ ನೀರಾವರಿ ವಲಯ ಹಂಗಾಮಿ ಕಾರ್ಮಿಕರ ವೇತನ ಹೆಚ್ಚಿಸುವಂತೆ ಒತ್ತಾಯಿಸಿ ಮುನಿರಾಬಾದ್‌ನಿಂದ ಬೆಂಗಳೂರಿಗೆ ಕಾಲ್ನಡಿಗೆ ಜಾಥಾ ಹೊರಟಿದ್ದ ಹೋರಾಟಗಾರರನ್ನೆಲ್ಲ ರಾಯಚೂರು ಪೊಲೀಸರು ತುಮಕೂರು ಜಿಲ್ಲೆ ಶಿರಾ ಬಳಿ ಬಂಧಿಸಿ ಗುರುವಾರ ನಗರಕ್ಕೆ ತಂದು ಬಿಟ್ಟಿದ್ದಾರೆ. ಕಾರ್ಮಿಕ ಮುಖಂಡ ಆರ್‌.ಮಾನಸಯ್ಯ ಅವರನ್ನು ಬಂಧನದಲ್ಲಿ ಇರಿಸಲಾಗಿದೆ.

ರಾಯಚೂರು ನಗರ ಠಾಣೆ ಸೇರಿದಂತೆ ವಿವಿಧ ಠಾಣೆಗಳಲ್ಲಿ ಹೋರಾಟಗಾರರ ವಿರುದ್ಧ ಪ್ರಕರಣಗಳನ್ನು ದಾಖಲಿಸಲಾಗಿದೆ. ಜಿಲ್ಲಾ ಪೊಲೀಸರ ವರ್ತನೆಯನ್ನು ವಿರೋಧಿಸಿ ಕಾರ್ಮಿಕರು ಜಿಲ್ಲಾಧಿಕಾರಿ ಕಚೇರಿ ಎದುರಿನ ಟಿಪ್ಪು ಸುಲ್ತಾನ್‌ ಉದ್ಯಾನದಲ್ಲಿ ಪ್ರತಿಭಟನೆ ಆರಂಭಿಸಿದ್ದಾರೆ. ಕಾರ್ಮಿಕರು ಹೆಚ್ಚಿನ ಸಂಖ್ಯೆಯಲ್ಲಿ ಸೇರ್ಪಡೆಯಾಗುತ್ತಿದ್ದು ಪ್ರತಿಭಟನೆ ಬಿರುಸುಗೊಳ್ಳುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT