ADVERTISEMENT

ಮೇವು ಬೆಳೆ ಮಾಹಿತಿಗೆ ಆ್ಯಪ್

​ಪ್ರಜಾವಾಣಿ ವಾರ್ತೆ
Published 1 ಮೇ 2016, 19:53 IST
Last Updated 1 ಮೇ 2016, 19:53 IST

ಬೆಂಗಳೂರು: ‘ಜಾನುವಾರುಗಳಿಗೆ ಸಮರ್ಪಕವಾಗಿ ಮೇವು ಒದಗಿಸಲು ಹೊಸ ಹೊಸ ಮೇವಿನ ತಳಿಗಳನ್್ನು ಸಂಶೋಧನೆ ಮಾಡಬೇಕು’ ಎಂದು ಬೀದರ್‌ನ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿ ಡಾ.ಸಿ. ರೇಣುಕಾಪ್ರಸಾದ್ ಹೇಳಿದರು.

ಹೆಬ್ಬಾಳದ ಪಶುವೈದ್ಯಕೀಯ ಕಾಲೇಜಿನಲ್ಲಿ ಏರ್ಪಡಿಸಿದ್ದ ‘ವಿಶ್ವ ಪಶು ವೈದ್ಯಕೀಯ’ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಮೇವು ಬೆಳೆ ಮಾಹಿತಿಗೆ ಆ್ಯಪ್:  ಪಶು ವೈದ್ಯಕೀಯ ಕಾಲೇಜಿನ ಸಂಶೋಧನಾ ವಿದ್ಯಾರ್ಥಿ ಪವನ್ ಅವರು ಹಗರಿಬೊಮ್ಮನಹಳ್ಳಿಯ ಜಯಲಕ್ಷ್ಮಿ ಆಗ್ರೊ ಟೆಕ್ ಲಿಮಿಟೆಡ್ ಸಂಸ್ಥೆಯ ಸಹಯೋಗದಲ್ಲಿ ರೈತರಿಗೆ ಮೇವಿನ ತಳಿಗಳ ಬಗ್ಗೆ ಮಾಹಿತಿ ನೀಡುವ ‘fodder kannada’ ಎಂಬ ಆ್ಯಪ್ ಅಭಿವೃದ್ಧಿಪಡಿಸಿದ್ದಾರೆ.

ಶನಿವಾರ ನಡೆದ ಕಾರ್ಯಕ್ರಮದಲ್ಲಿ ಈ ಆ್ಯಪ್‌ನ್ನು ಬಿಡುಗಡೆ ಮಾಡಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.