ADVERTISEMENT

ಯಡಿಯೂರಪ್ಪ ವಿರುದ್ಧ ಅವಹೇಳನಕಾರಿ ಹೇಳಿಕೆ: ಸಿಎಂ ಸಿದ್ದರಾಮಯ್ಯ ಸೇರಿ ಇತರ ಕಾಂಗ್ರೆಸ್‌ ಮುಖಂಡರಿಗೆ ಹೈಕೋರ್ಟ್‌ ನೋಟಿಸ್‌

​ಪ್ರಜಾವಾಣಿ ವಾರ್ತೆ
Published 15 ಮಾರ್ಚ್ 2018, 12:24 IST
Last Updated 15 ಮಾರ್ಚ್ 2018, 12:24 IST
ಯಡಿಯೂರಪ್ಪ ವಿರುದ್ಧ ಅವಹೇಳನಕಾರಿ ಹೇಳಿಕೆ: ಸಿಎಂ ಸಿದ್ದರಾಮಯ್ಯ ಸೇರಿ ಇತರ ಕಾಂಗ್ರೆಸ್‌ ಮುಖಂಡರಿಗೆ ಹೈಕೋರ್ಟ್‌ ನೋಟಿಸ್‌
ಯಡಿಯೂರಪ್ಪ ವಿರುದ್ಧ ಅವಹೇಳನಕಾರಿ ಹೇಳಿಕೆ: ಸಿಎಂ ಸಿದ್ದರಾಮಯ್ಯ ಸೇರಿ ಇತರ ಕಾಂಗ್ರೆಸ್‌ ಮುಖಂಡರಿಗೆ ಹೈಕೋರ್ಟ್‌ ನೋಟಿಸ್‌   

ಬೆಂಗಳೂರು: ಸಾರ್ವಜನಿಕವಾಗಿ ತಮ್ಮ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡುತ್ತಿರುವುದರ ವಿರುದ್ಧ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್‌, ಕಾಂಗ್ರೆಸ್‌ ಮುಖಂಡರಿಗೆ ನೋಟಿಸ್‌ ಜಾರಿ ಮಾಡಿದೆ. 

ಮುಖ್ಯಮಂತ್ರಿ ಸಿದ್ದರಾಮಯ್ಯ, ದಿನೇಶ್ ಗುಂಡೂರಾವ್, ಉಗ್ರಪ್ಪ ಸೇರಿದಂತೆ ಹಲವು ಕಾಂಗ್ರೆಸ್ ‌ಮುಖಂಡರಿಗೆ ಗುರುವಾರ ಹೈಕೋರ್ಟ್‌ ತುರ್ತು ನೋಟಿಸ್ ಜಾರಿಗೊಳಿಸಿದೆ.

ಯಡಿಯೂರಪ್ಪ ವಿರುದ್ಧ ದಾಖಲಾಗಿರುವ ಪ್ರಕರಣಗಳು ಮತ್ತು ವೈಯಕ್ತಿಕ ವಿಚಾರಗಳ ಬಗ್ಗೆ ಮಾಧ್ಯಮಗಳು ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಮಾತನಾಡದಂತೆ ಹಾಗೂ ಆ ಸುದ್ದಿಗಳನ್ನು ಪ್ರಸಾರ ಮಾಡದಂತೆ ಮಾಧ್ಯಮಗಳಿಗೂ ನಿರ್ಬಂಧ ಹೇರುವಂತೆ ಕೋರಿ ಅರ್ಜಿ ಸಲ್ಲಿಕೆಯಾಗಿದೆ. 

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.