ADVERTISEMENT

ಯಡಿಯೂರಪ್ಪ ವಿರುದ್ಧ ಎಸಿಬಿ ದಾಖಲಿಸಿದ್ದ ಎಫ್‌ಐಆರ್‌ಗೆ ಹೈಕೋರ್ಟ್ ತಡೆ

​ಪ್ರಜಾವಾಣಿ ವಾರ್ತೆ
Published 22 ಸೆಪ್ಟೆಂಬರ್ 2017, 9:36 IST
Last Updated 22 ಸೆಪ್ಟೆಂಬರ್ 2017, 9:36 IST
ಯಡಿಯೂರಪ್ಪ ವಿರುದ್ಧ ಎಸಿಬಿ ದಾಖಲಿಸಿದ್ದ ಎಫ್‌ಐಆರ್‌ಗೆ ಹೈಕೋರ್ಟ್ ತಡೆ
ಯಡಿಯೂರಪ್ಪ ವಿರುದ್ಧ ಎಸಿಬಿ ದಾಖಲಿಸಿದ್ದ ಎಫ್‌ಐಆರ್‌ಗೆ ಹೈಕೋರ್ಟ್ ತಡೆ   

ಬೆಂಗಳೂರು: ‘ಶಿವರಾಮ ಕಾರಂತ ಬಡಾವಣೆಯ ಅಕ್ರಮ ಡಿನೋಟಿಫಿಕೇಷನ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ವಿರುದ್ಧ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ದಾಖಲಿಸಿರುವ ಎಫ್‌ಐಆರ್‌ಗೆ ಹೈಕೋರ್ಟ್‌ ಶುಕ್ರವಾರ ತಡೆ ನೀಡಿದೆ.

ಯಡಿಯೂರಪ್ಪ ಅವರು ಮಧ್ಯಂತರ ತಡೆ ನೀಡುವಂತೆ ಕೋರಿ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಇಂದು ಹೈಕೋರ್ಟ್‌ನ ಏಕ ಸದಸ್ಯ ಪೀಠ ಮಧ್ಯಂತರ ತಡೆ ನೀಡಿರುವುದರಿಂದ ಯಡಿಯೂರಪ್ಪ ಅವರು ತಾತ್ಕಲಿಕವಾಗಿ ನಿರಾಳರಾಗಿದ್ದಾರೆ.

ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದ ಅವಧಿಯಲ್ಲಿ ಡಾ.ಕೆ.ಶಿವರಾಮ ಕಾರಂತ ಬಡಾವಣೆಯ ನಿರ್ಮಾಣಕ್ಕಾಗಿ ಬೆಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ (ಬಿಡಿಎ) ವಶಪಡಿಸಿಕೊಂಡಿದ್ದ ಜಮೀನಿನ ಪೈಕಿ 257 ಎಕರೆ 20.5 ಗುಂಟೆ ಜಮೀನನ್ನು ಅಕ್ರಮವಾಗಿ ಡಿನೋಟಿಫಿಕೇಷನ್ ಮಾಡಲು ಅಕ್ರಮವಾಗಿ ಆದೇಶಿಸಿದ್ದರು’ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಎಸಿಬಿ ಎಫ್‌ಐಆರ್ ದಾಖಲಿಸಿತ್ತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.