ADVERTISEMENT

ಯಮನೂರಿನಲ್ಲಿ ಖಾಕಿ ದರ್ಪ

ಮಾನವೀಯತೆ ಮರೆತು ಹಿಗ್ಗಾಮುಗ್ಗ ಥಳಿಸಿದ ಪೊಲೀಸರು

​ಪ್ರಜಾವಾಣಿ ವಾರ್ತೆ
Published 30 ಜುಲೈ 2016, 7:14 IST
Last Updated 30 ಜುಲೈ 2016, 7:14 IST
ಯಮನೂರಿನಲ್ಲಿ ಖಾಕಿ ದರ್ಪ
ಯಮನೂರಿನಲ್ಲಿ ಖಾಕಿ ದರ್ಪ   

ಧಾರವಾಡ: ಮಹದಾಯಿ ನ್ಯಾಯಾಧಿಕರಣದ ಮಧ್ಯಂತರ ತೀರ್ಪು ವಿರೋಧಿಸಿ ಧಾರವಾಡದ ನವಲಗುಂದದ ಯಮನೂರ ಗ್ರಾಮದಲ್ಲಿ ನಡೆಯುತ್ತಿದ್ದ ಬಂದ್ ವೇಳೆ ಮುದುಕರು, ಮಹಿಳೆಯರ ಮೇಲೆ ಪೊಲೀಸರು ಅಮಾನುಷವಾಗಿ ಲಾಠಿ ಪ್ರಹಾರ ನಡೆಸಿದ್ದಾರೆ.

ಪೊಲೀಸ್‌ ದೌರ್ಜನ್ಯದ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗುತ್ತಿದ್ದಂತೆ ಘಟನೆ ಬಗ್ಗೆ ಪ್ರತಿಕ್ರಿಯಿಸಿರುವ ಗೃಹ ಸಚಿವ ಡಾ .ಜಿ. ಪರಮೇಶ್ವರ್‌   ಅವರು ಮಹಿಳೆಯರ,ವೃದ್ಧರ ಮೇಲೆ ಹಲ್ಲೆ ನಡೆಸಿದುದಕ್ಕೆ ವಿಷಾದ ವ್ಯಕ್ತ ಪಡಿಸುತ್ತೇನೆ.  ಪೊಲೀಸರು ಸಂಯಮ ಮೀರಿ ವರ್ತಿಸಿದರೆ ಕ್ರಮ ಕೈಗೊಳ್ಳುವಂತೆ ಹಿರಿಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದಿದ್ದಾರೆ.

ಬಿಎಸ್ ವೈ ಖಂಡನೆ: ಯಮನೂರಿನಲ್ಲಿ ಮನೆಯಲ್ಲಿ ಗಂಡಸರು ಇಲ್ಲದ ಮೇಲೆ ಮನೆಗೆ ನುಗ್ಗಿ ಮಹಿಳೆ ಮತ್ತು ಮಕ್ಕಳ ಮೇಲೆ ಹಲ್ಲೆ ನಡೆಸಿದ ಪೊಲೀಸರ ದರ್ಪವನ್ನು ಬಿಎಸ್ ಯಡಿಯೂರಪ್ಪ ಖಂಡಿಸಿದ್ದಾರೆ. ಈ ರೀತಿಯ ದೌರ್ಜನ್ಯ ನಡೆಯುತ್ತಿದ್ದರೂ ಉನ್ನತ ಪೊಲೀಸ್ ಅಧಿಕಾರಿಗಳು ಯಾಕೆ ಮೌನ ವಹಿಸಿದ್ದಾರೆ ಎಂದು ಗೊತ್ತಾಗುತ್ತಿಲ್ಲ. ಸರಕಾರ ಬದುಕಿದೆಯಾ? ಸತ್ತಿದೆಯಾ? ಎಂಬುದೂ ಗೊತ್ತಾಗುತ್ತಿಲ್ಲ. ಪೊಲೀಸರು ದೌರ್ಜನ್ಯ ನಿಲ್ಲಿಸಿ ಶಾಂತಿಯುತವಾದ ಬಂದ್‍ಗೆ ಅನುವು ಮಾಡಿಕೊಡಬೇಕು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT