ADVERTISEMENT

ಯಲಬುರ್ಗಾ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಸುಟ್ಟು ಕರಕಲಾದ ವಿಆರ್‌ಎಲ್‌ ಬಸ್‌; 32 ಪ್ರಯಾಣಿಕರು ಅಪಾಯದಿಂದ ಪಾರು

​ಪ್ರಜಾವಾಣಿ ವಾರ್ತೆ
Published 21 ಏಪ್ರಿಲ್ 2018, 4:02 IST
Last Updated 21 ಏಪ್ರಿಲ್ 2018, 4:02 IST
ಯಲಬುರ್ಗಾ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಸುಟ್ಟು ಕರಕಲಾದ ವಿಆರ್‌ಎಲ್‌ ಬಸ್‌; 32 ಪ್ರಯಾಣಿಕರು ಅಪಾಯದಿಂದ ಪಾರು
ಯಲಬುರ್ಗಾ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಸುಟ್ಟು ಕರಕಲಾದ ವಿಆರ್‌ಎಲ್‌ ಬಸ್‌; 32 ಪ್ರಯಾಣಿಕರು ಅಪಾಯದಿಂದ ಪಾರು   

ಕೊಪ್ಪಳ: ಯಲಬುರ್ಗಾ ತಾಲೂಕಿನ ಗುನ್ನಾಳ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ವಿಆರ್‌ಎಲ್‌ ಸಂಸ್ಥೆಯ ಬಸ್‌ನಲ್ಲಿ‌ ಬ್ಯಾಟರಿ ಶಾರ್ಟ್ ಸರ್ಕೀಟ್‌  ಸಂಭವಿಸಿ ಬಸ್‌ ಸುಟ್ಟು ಕರಕಲಾಗಿದೆ.

ಬೆಂಗಳೂರಿನಿಂದ ವಿಜಯಪುರಕ್ಕೆ ಬಸ್ ಸಂಚರಿಸುತ್ತಿತ್ತು. ಗುನ್ನಾಳ ಕ್ರಾಸ್ ಬಳಿ ಏಕಾಏಕಿ ಬ್ಯಾಟರಿಯಲ್ಲಿ ಶಾರ್ಟ್ ಸರ್ಕೀಟ್‌ ಸಂಭವಿಸಿದೆ. 

ಕೂಡಲೇ ಅಪಾಯದ ಮುನ್ಸೂಚನೆ ಅರಿತ ಚಾಲಕ ಬಸ್ ನಿಲ್ಲಿಸಿದ್ದಾರೆ. ಬಸ್ ಸಿಬ್ಬಂದಿ ಪ್ರಯಾಣಿಕರು ಹಾಗೂ ಲಗೇಜ್‌ನ್ನು ಕೆಳಗೆ ಇಳಿಸಿದ್ದಾರೆ.

ADVERTISEMENT

ಬಸ್‌ನಲ್ಲಿದ್ದ 32 ಜನ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಸ್ಥಳಕ್ಕೆ ಆಗಮಿಸಿದ ಕುಷ್ಟಗಿ ಅಗ್ನಿಶಾಮಕ ದಳದ ಸಿಬ್ಬಂದಿ,  ಬೆಂಕಿ‌‌ ನಂದಿಸಲು ಪ್ರಯತ್ನಿಸಿದರು. ಬಸ್ ಚಾಲಕನ ಸಮಯ ಪ್ರಜ್ಞೆಯಿಂದ ಭಾರಿ ಅನಾಹುತ ತಪ್ಪಿದೆ.  ಬೇವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.