ADVERTISEMENT

ರತ್ನಮ್ಮ ಹೆಗ್ಗಡೆ ಮಹಿಳಾ ಗ್ರಂಥ ಬಹುಮಾನ

​ಪ್ರಜಾವಾಣಿ ವಾರ್ತೆ
Published 5 ಜನವರಿ 2017, 19:30 IST
Last Updated 5 ಜನವರಿ 2017, 19:30 IST

ಧಾರವಾಡ: ಕರ್ನಾಟಕ ವಿದ್ಯಾವರ್ಧಕ ಸಂಘವು 2015ನೇ ಸಾಲಿನ ಮಾತೋಶ್ರೀ ರತ್ನಮ್ಮ ಹೆಗ್ಗಡೆ ಮಹಿಳಾ ಗ್ರಂಥ ಬಹುಮಾನಕ್ಕೆ ಮೂರು ಉತ್ತಮ ಕನ್ನಡ ಕೃತಿಗಳನ್ನು ಆಯ್ಕೆ ಮಾಡಿದೆ.

ಬೆಂಗಳೂರಿನ ಡಾ. ಲತಾ ಗುತ್ತಿ ಅವರ ‘ಸ್ವಾತಂತ್ರ್ಯ ಪೂರ್ವೋತ್ತರ ಕಥನ’ ಕಾದಂಬರಿ, ಮೈಸೂರಿನ ವಸುಮತಿ ಉಡುಪ ಅವರ ‘ಮನ್ವಂತರ’ ಕಾದಂಬರಿ ಹಾಗೂ ಉತ್ತರ ಕನ್ನಡ ಜಿಲ್ಲೆಯ ನಾಗರಕಟ್ಟೆಯ ಕಾವ್ಯಾ ಕಡಮೆ ಅವರ ‘ಪುನರಪಿ’ ಕಾದಂಬರಿಗಳು  ಆಯ್ಕೆಯಾಗಿವೆ. ಬಹುಮಾನವು ತಲಾ ₹ 10 ಸಾವಿರ ನಗದು ಹಾಗೂ ಪ್ರಮಾಣಪತ್ರವನ್ನು ಒಳಗೊಂಡಿದೆ’ ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.