ADVERTISEMENT

ರಾಘವೇಶ್ವರ ಶ್ರೀಗಳಿಗೆ ನೋಟಿಸ್: ಕೋರ್ಟ್‌ ಆದೇಶ

​ಪ್ರಜಾವಾಣಿ ವಾರ್ತೆ
Published 3 ಮೇ 2016, 19:30 IST
Last Updated 3 ಮೇ 2016, 19:30 IST
ರಾಘವೇಶ್ವರ ಶ್ರೀಗಳಿಗೆ  ನೋಟಿಸ್: ಕೋರ್ಟ್‌ ಆದೇಶ
ರಾಘವೇಶ್ವರ ಶ್ರೀಗಳಿಗೆ ನೋಟಿಸ್: ಕೋರ್ಟ್‌ ಆದೇಶ   

ಬೆಂಗಳೂರು: ರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಸ್ವಾಮೀಜಿ ಅವರನ್ನು ಅತ್ಯಾಚಾರ ಆರೋಪದಿಂದ ಕೈಬಿಟ್ಟ ಅಧೀನ ನ್ಯಾಯಾಲಯದ  ಆದೇಶ ಪ್ರಶ್ನಿಸಿ ರಾಮ ಕಥಾ ಗಾಯಕಿ ಪ್ರೇಮಲತಾ ಹೈಕೋ ರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದ್ದಾರೆ.

ನ್ಯಾಯಮೂರ್ತಿ ಆನಂದ ಬೈರಾರೆಡ್ಡಿ ಅವರಿದ್ದ ಏಕಸದಸ್ಯ ಪೀಠವು ಪ್ರಕರಣದ ವಿಚಾರಣೆ ನಡೆಸಿ ರಾಘವೇಶ್ವರ ಭಾರತೀ ಸ್ವಾಮೀಜಿ ಅವರಿಗೆ ನೋಟಿಸ್ ಜಾರಿ ಮಾಡಲು ಆದೇಶಿಸಿತು.

ಈ ಪ್ರಕರಣದ ಕುರಿತಂತೆ ಈಗಾ ಗಲೇ ರಾಜ್ಯ ಪಬ್ಲಿಕ್‌ ಪ್ರಾಸಿಕ್ಯೂಷನ್ ಸಲ್ಲಿಸಿರುವ ಪುನರಾವಲೋಕನ ಕ್ರಿಮಿನಲ್‌ ಅರ್ಜಿಯ ಜೊತೆಗೇ ಈ ಅರ್ಜಿಯನ್ನೂ ಸೇರ್ಪಡೆ ಮಾಡಲು ಪೀಠವು ನಿರ್ದೇಶಿಸಿ ವಿಚಾರಣೆ ಮುಂದೂಡಿತು.

ತಮ್ಮ ಮೇಲೆ ಅತ್ಯಾಚಾರ ನಡೆಸಿದ ಪ್ರಕರಣದಲ್ಲಿ ರಾಘವೇಶ್ವರ ಭಾರತಿ ಸ್ವಾಮೀಜಿ ಅವರನ್ನು ಆರೋಪಮುಕ್ತ ಗೊಳಿಸಿ ನಗರದ 54ನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶ ಜಿ.ಬಿ.ಮುದಿಗೌಡರ್ ಅವರು ಮಾರ್ಚ್ 31ರಂದು ಹೊರಡಿಸಿದ ಆದೇಶ ರದ್ದುಗೊಳಿಸುವಂತೆ ಪ್ರೇಮಲತಾ ಕೋರಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.