ADVERTISEMENT

‘ರಾಜಕಾರಣಿಗಳಿಂದಲೇ ವೀರಶೈವ ಧರ್ಮ ಛಿದ್ರ’

​ಪ್ರಜಾವಾಣಿ ವಾರ್ತೆ
Published 24 ಮೇ 2017, 19:30 IST
Last Updated 24 ಮೇ 2017, 19:30 IST
ಹುಬ್ಬಳ್ಳಿ: ‘ಮತಕ್ಕಾಗಿ ರಾಜಕಾರಣಿಗಳು ವೀರಶೈವ ಧರ್ಮವನ್ನು ಛಿದ್ರ, ಛಿದ್ರ ಮಾಡುತ್ತಿದ್ದಾರೆ. ಆದ್ದರಿಂದ ಯಾರ ಆಮಿಷಕ್ಕೂ ಬಲಿಯಾಗದೆ ಪಂಚಪೀಠಗಳು ಒಂದಾಗಿ ಕಾರ್ಯ ನಿರ್ವಹಿಸಬೇಕು. ಮಾನವ ಧರ್ಮವನ್ನು ಎತ್ತಿ ಹಿಡಿಯಬೇಕು’ ಎಂದು ರಂಭಾಪುರಿ ಪೀಠದ ವೀರಸೋಮೇಶ್ವರ ಶಿವಾಚಾರ್ಯರು ಹೇಳಿದರು.
 
ನಗರದ ರಂಭಾಪುರಿ ಕಲ್ಯಾಣ ಮಂಟಪದಲ್ಲಿ ಬುಧವಾರ ನಡೆದ ವೀರಶೈವ ಲಿಂಗಾಯತ ಸಮಾಜದ ಸಭೆ ಉದ್ದೇಶಿಸಿ ಅವರು ಮಾತನಾಡಿದರು.
 
‘ಕಳಸಾ– ಬಂಡೂರಿ ವಿವಾದ ಸೇರಿದಂತೆ ಅನೇಕ ಸಮಸ್ಯೆಗಳು ರೈತರನ್ನು ಕಾಡುತ್ತಿವೆ. ಸತತ ಬರಗಾಲ ಆವರಿಸಿದೆ. ಮುಂದಿನ ಚುನಾವಣೆಗೆ ಮತ ಕೇಳಲು ಬಂದಾಗ ರಾಜಕಾರಣಿಗಳಿಗೆ ತಕ್ಕ ಪಾಠ ಕಲಿಸಿ’ ಎಂದು ಅವರು ಹೇಳಿದರು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.