ADVERTISEMENT

ರಾಜಕೀಯಕ್ಕೆ ಬರುವ ಇಂಗಿತ

​ಪ್ರಜಾವಾಣಿ ವಾರ್ತೆ
Published 3 ಸೆಪ್ಟೆಂಬರ್ 2015, 19:32 IST
Last Updated 3 ಸೆಪ್ಟೆಂಬರ್ 2015, 19:32 IST

ಮೈಸೂರು: ‘ರಾಜಕೀಯಕ್ಕೆ ಬರಲು ಆಸಕ್ತಿಯಿದೆ. ಆದರೆ, ಅದಕ್ಕಿನ್ನೂ ವೇದಿಕೆ ಸಿದ್ಧವಾಗಿಲ್ಲ’ ಎಂದು ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ತಿಳಿಸಿದರು.

ಇಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜಕೀಯಕ್ಕೆ ಧುಮುಕಲು ಸಿದ್ಧನಾಗಬೇಕು ಎಂಬ ನಿರ್ಧಾರವಾಗಿದೆ. ಆದರೆ, ಅದಕ್ಕೆ ಸಂಬಂಧಿಸಿದ ಸ್ಪಷ್ಟ ರೂಪರೇಷಗಳು ಇನ್ನೂ ಸಿದ್ಧವಾಗಿಲ್ಲ. ಈ ಕುರಿತು ಇನ್ನಷ್ಟು ಸ್ಪಷ್ಟತೆಯ ಅಗತ್ಯವಿದೆ. ಈವರೆಗೆ ಯಾವುದೇ ರಾಜಕೀಯ ಪಕ್ಷಗಳು ಸಂಪರ್ಕಿಸಿಲ್ಲ ಎಂದು ಸ್ಪಷ್ಟಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.