ADVERTISEMENT

ರಾಜ್ಯದಲ್ಲಿ ಈಗಾಗಲೇ ಗೋ ಹತ್ಯೆ ನಿಷೇಧ ಕಾಯ್ದೆ ಜಾರಿಯಲ್ಲಿದೆ: ಕಾನೂನು ಸಚಿವ ಟಿ.ಬಿ.ಜಯಚಂದ್ರ

​ಪ್ರಜಾವಾಣಿ ವಾರ್ತೆ
Published 27 ಮೇ 2017, 7:16 IST
Last Updated 27 ಮೇ 2017, 7:16 IST
ರಾಜ್ಯದಲ್ಲಿ ಈಗಾಗಲೇ ಗೋ ಹತ್ಯೆ ನಿಷೇಧ ಕಾಯ್ದೆ ಜಾರಿಯಲ್ಲಿದೆ: ಕಾನೂನು ಸಚಿವ ಟಿ.ಬಿ.ಜಯಚಂದ್ರ
ರಾಜ್ಯದಲ್ಲಿ ಈಗಾಗಲೇ ಗೋ ಹತ್ಯೆ ನಿಷೇಧ ಕಾಯ್ದೆ ಜಾರಿಯಲ್ಲಿದೆ: ಕಾನೂನು ಸಚಿವ ಟಿ.ಬಿ.ಜಯಚಂದ್ರ   

ಹುಬ್ಬಳ್ಳಿ: ಈಗಾಗಲೇ ರಾಜ್ಯದಲ್ಲಿ ಗೋ ಹತ್ಯೆ ನಿಷೇಧ ಕಾಯ್ದೆ ಜಾರಿಯಲ್ಲಿದೆ. ಈ ಕಾಯ್ದೆ 1964ರಿಂದಲೇ ಜಾರಿಯಲ್ಲಿದ್ದು, ಕೇಂದ್ರ ಸರ್ಕಾರ ನೂತನವಾಗಿ ಜಾರಿಗೆ ತಂದ ಕಾಯ್ದೆ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲ ಎಂದು ಕಾನೂನು ಸಚಿವ ಟಿ.ಬಿ.ಜಯಚಂದ್ರ ತಿಳಿಸಿದರು. 

ಶನಿವಾರ ನೂತನ ಕೋರ್ಟ್ ಸಂಕೀರ್ಣಕ್ಕೆ ಭೇಟಿ ಕೊಟ್ಟ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,  ಕೇಂದ್ರ ಸರ್ಕಾರ ಜಾರಿಗೆ ತಂದಿರುವ ನೂತನ ಕಾಯ್ದೆಯ ಪ್ರತಿ ಇನ್ನೂ ಕೈಗೆ ಸಿಕ್ಕಿಲ್ಲ. ಸಂಪೂರ್ಣ ವಿವರ ಪಡೆದ ಬಳಿಕ ಪ್ರತಿಕ್ರಿಯೆ ನೀಡುವೆ ಎಂದು ಅವರು ಹೇಳಿದರು. 

ಈ  ಹಿಂದೇ ರಾಜ್ಯದಲ್ಲಿ ಬಿಜೆಪಿ ಅಧಿಕಾರದಲ್ಲಿ ಇದ್ದ ವೇಳೆ ಜಾರಿಗೆ ತಂದ ಕಾಯ್ದೆಯನ್ನ ನಮ್ಮ ಸರ್ಕಾರ ವಾಪಸ್ ಪಡೆದಿದೆ. ಗೋವುಗಳು ರಕ್ಷಣೆ ಹಾಗೂ ಜನರ ಭಾವನೆಗಳನ್ನು ಗಮನದಲ್ಲಿಟ್ಟುಕೊಂಡು ಕಾಯ್ದೆ ಜಾರಿಯಾಗಬೇಕು ಎಂದರು.

ADVERTISEMENT

ಆಹಾರದ ಹಕ್ಕಿನ ಪ್ರಶ್ನೆಯೂ ಉದ್ಭವಿಸಲಿದೆ. ಒಂದು ಧರ್ಮ ಹಾಗೂ ಜನಾಂಗದ ವಿರೋಧವಾಗಬಾರದು. ಸಂಘರ್ಷಕ್ಕೆ ಎಡೆಮಾಡಿಕೊಡಬಾರದು ಎಂದು ತಿಳಿಸಿದರು.

ಪರಿಶೀಲನೆ: ವಿದ್ಯಾನಗರದ ನೂತನ ಕೋರ್ಟ್ ಸಂಕೀರ್ಣಕ್ಕೆ ಸಚಿವ ಟಿ.ಬಿ.ಜಯಚಂದ್ರ ಅವರು ಜಿಲ್ಲಾ ಉಸ್ತುವಾರಿ ಸಚಿವ ವಿನಯ ಕುಲಕರ್ಣಿ, ಶಾಸಕ ಪ್ರಸಾದ ಅಬ್ಬಯ್ಯ ಅವರೊಂದಿಗೆ ಭೇಟಿ ನೀಡಿ ಪರಿಶೀಲಿಸಿದರು.

ಕೋರ್ಟ್‌ನಲ್ಲಿ ಎಲ್ಲ ಸೌಲಭ್ಯಗಳನ್ನು ಒಳಗೊಂಡಿದ್ದು, ಕಾಮಗಾರಿ ಪೂರ್ಣ ಪ್ರಮಾಣದಲ್ಲಿ ಮುಗಿಯುವ ಹಂತಕ್ಕೆ ಬಂದಿದೆ. ಜುಲೈನಲ್ಲಿ ಉದ್ಘಾಟನೆ ಆಗಲಿದೆ. ಇಲ್ಲಿವರೆಗೆ ₹122 ಕೋಟಿ ಖರ್ಚು ಮಾಡಲಾಗಿದೆ ಎಂದು ಜಯಚಂದ್ರ ಅವರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.