ADVERTISEMENT

ರಾಜ್ಯದಲ್ಲಿ ಕಾನೂನು ಕುಸಿತ: ಹೈಕೋರ್ಟ್

​ಪ್ರಜಾವಾಣಿ ವಾರ್ತೆ
Published 9 ಅಕ್ಟೋಬರ್ 2015, 19:30 IST
Last Updated 9 ಅಕ್ಟೋಬರ್ 2015, 19:30 IST

ಬೆಂಗಳೂರು: ‘ರಾಜ್ಯದಲ್ಲಿ ಶಾಂತಿ ಪಾಲನೆ ಮತ್ತು ಸುವ್ಯವಸ್ಥೆಯ ಸಮಸ್ಯೆ ತಲೆದೋರಿದೆ’ ಎಂದು ಹೈಕೋರ್ಟ್‌ ತೀವ್ರ ಆತಂಕ ವ್ಯಕ್ತಪಡಿಸಿದೆ.

ಮಂಡ್ಯದ ಡಾ.ವಿ.ಎಲ್‌.ನಂದೀಶ್‌  ವಿರುದ್ಧದ ಕ್ರಿಮಿನಲ್‌ ಪ್ರಕರಣದಲ್ಲಿ ಲೋಕಾಯುಕ್ತ  ಪೊಲೀಸರು ಆರೋಪ ಪಟ್ಟಿ ದಾಖಲಿಸಲು ವಿಳಂಬ ಮಾಡುತ್ತಿದ್ದಾರೆ ಎಂಬ ದೂರಿಗೆ ಸಂಬಂಧಿಸಿದಂತೆ   ನ್ಯಾಯಮೂರ್ತಿ ಎ.ಎನ್‌.ವೇಣುಗೋಪಾಲಗೌಡ ಅವರಿದ್ದ  ಏಕಸದಸ್ಯ ಪೀಠವು ಶುಕ್ರವಾರ ವಿಚಾರಣೆ ನಡೆಸಿತು.

ಈ ವೇಳೆ ನ್ಯಾಯಮೂರ್ತಿಗಳು, ‘ಗೃಹ ಇಲಾಖೆಯ ವಿವಿಧ ಹಂತಗಳಲ್ಲಿ 10 ಸಾವಿರ ಹುದ್ದೆಗಳು ಖಾಲಿ ಇವೆ. ಇವನ್ನು ಭರ್ತಿ ಮಾಡುವಲ್ಲಿ ಸರ್ಕಾರ ವಿಳಂಬ ಧೋರಣೆ ಅನುಸರಿಸುತ್ತಿದೆ. ಇದು ಶಾಂತಿ ಪಾಲನೆ ಹಾಗೂ ಕಾನೂನು ಸುವ್ಯವಸ್ಥೆಯ ಮೇಲೆ ಗಾಢ ಪರಿಣಾಮ ಬೀರಿದೆ’ ಎಂದು ಕಳವಳ ವ್ಯಕ್ತಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.