ADVERTISEMENT

ರಾಜ್ಯದಲ್ಲೂ ರೈತ ಸುರಕ್ಷಾ ಯೋಜನೆ

​ಪ್ರಜಾವಾಣಿ ವಾರ್ತೆ
Published 20 ಜುಲೈ 2016, 19:30 IST
Last Updated 20 ಜುಲೈ 2016, 19:30 IST

ದೊಡ್ಡಬಳ್ಳಾಪುರ: ಕೇಂದ್ರ ಸರ್ಕಾರದ 2016ರ ಮುಂಗಾರು ಹಂಗಾಮಿನ ‘ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್‌ ಬಿಮಾ(ವಿಮಾ) ಯೋಜನೆ’ಯನ್ನು ರಾಜ್ಯದಲ್ಲೂ ಅನುಷ್ಠಾನಗೊಳಿಸಲಾಗುತ್ತಿದೆ.

ಪ್ರಕೃತಿ ವಿಕೋಪಗಳಾದ ಅಲಿಕಲ್ಲು ಮಳೆ, ಭೂ ಕುಸಿತ, ಬೆಳೆ ಮುಳುಗುಡೆ ಸೇರಿದಂತೆ ಕಟಾವಿನ ನಂತರ ಬೆಳೆಯನ್ನು ಜಮೀನಿನಲ್ಲಿ ಒಣಗಲು ಬಿಟ್ಟಂತಹ ಸಂದರ್ಭದಲ್ಲಿ ಎರಡು ವಾರದೊಳಗಾಗಿ ಚಂಡಮಾರುತ ಅಥವಾ ಅಕಾಲಿಕ ಮಳೆಯಿಂದ ಬೆಳೆ ನಷ್ಟವಾದಲ್ಲಿ ಪರಿಹಾರ ನೀಡಲಾಗುವುದು.

ಬೆಳೆ ಸಾಲ ಪಡೆದ ಹಾಗೂ ಪಡೆಯದ ರೈತರು ಈ   ವಿಮಾ ಯೋಜನೆಯಲ್ಲಿ ನೋಂದಣಿ ಮಾಡಿಕೊಳ್ಳಲು ಅವಕಾಶವಿದೆ.

ಮುಸುಕಿನ ಜೋಳ, ತೋಗರಿ, ಹುರುಳಿ, ನೆಲಗಡಲೆ ಮತ್ತು ಅವರೆ ಬೆಳೆಗಳಿಗೆ ವಿಮೆಯನ್ನು ಮಾಡಿಸಬಹುದಾಗಿದೆ. ವಿಮೆಗಾಗಿ ಬ್ಯಾಂಕುಗಳಲ್ಲಿ ಅರ್ಜಿ ಸಲ್ಲಿಸಲು ಜು.30 ರಂದು ಕೊನೆಯ ದಿನವಾಗಿದೆ.

ವಿಮೆ ನೋಂದಾಯಿಸಿಕೊಳ್ಳುವ ರೈತರು ಕಡ್ಡಾಯವಾಗಿ ಆದಾರ್‌ ಸಂಖ್ಯೆಯನ್ನು ನೀಡಬೇಕು ಎಂದು ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕ ತಿ.ತಿಮ್ಮೇಗೌಡ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.