ADVERTISEMENT

ರಾಜ್ಯದ ಕೆಲವೆಡೆ ಇಂದು ಮಳೆ ಸಾಧ್ಯತೆ

​ಪ್ರಜಾವಾಣಿ ವಾರ್ತೆ
Published 27 ಮಾರ್ಚ್ 2017, 19:54 IST
Last Updated 27 ಮಾರ್ಚ್ 2017, 19:54 IST

ಬೆಂಗಳೂರು: ರಾಜ್ಯದ ಉತ್ತರ ಹಾಗೂ ದಕ್ಷಿಣ ಒಳನಾಡಿನ ಮಧ್ಯೆ ಮೇಲ್ಮೈ ಸುಳಿಗಾಳಿ ನಿರ್ಮಾಣವಾಗಿರುವುದರಿಂದ ಮಂಗಳವಾರ ಅಲ್ಲಲ್ಲಿ ಮಳೆ ಬೀಳುವ ಸಾಧ್ಯತೆ ಇದೆ.

‘ರಾಜ್ಯದ ಉತ್ತರ, ದಕ್ಷಿಣ ಹಾಗೂ ಕರಾವಳಿ ಒಳನಾಡಿನ ಕೆಲವೆಡೆ ಮಳೆ ಬರಲಿದೆ. ಈಗ ನಿರ್ಮಾಣಗೊಂಡಿರುವ ಮೇಲ್ಮೈ ಸುಳಿಗಾಳಿ ಪ್ರಬಲವಾಗಿಲ್ಲ. ಹಾಗಾಗಿ ಉತ್ತಮ ಮಳೆಯನ್ನು ನಿರೀಕ್ಷೆ ಮಾಡಲು ಸಾಧ್ಯವಿಲ್ಲ’ ಎಂದು ಭಾರತೀಯ ಹವಾಮಾನ ಇಲಾಖೆಯ ಬೆಂಗಳೂರು ಕೇಂದ್ರದ ನಿರ್ದೇಶಕ ಸುಂದರ್‌ ಮೇತ್ರಿ ‘ಪ್ರಜಾವಾಣಿ’ಗೆ ತಿಳಿಸಿದರು.

ಬೆಂಗಳೂರಿನಲ್ಲಿ 36.1 ಡಿಗ್ರಿ ಸೆಲ್ಸಿಯಸ್‌: ಬೆಂಗಳೂರು ನಗರದಲ್ಲಿ ಸೋಮವಾರ ಗರಿಷ್ಠ ತಾಪಮಾನ 36.1 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿತ್ತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.