ADVERTISEMENT

ರಾಮಸೇನೆ ಮುಖಂಡ ಪ್ರಸಾದ್‌ ಬಂಧನ

ಕಲಬುರ್ಗಿ ಹತ್ಯೆ ಬಳಿಕ ‘ಫೇಸ್‌ಬುಕ್’ನಲ್ಲಿ ಹಿಂಸೆಗೆ ಪ್ರಚೋದನೆ

​ಪ್ರಜಾವಾಣಿ ವಾರ್ತೆ
Published 3 ಸೆಪ್ಟೆಂಬರ್ 2015, 19:32 IST
Last Updated 3 ಸೆಪ್ಟೆಂಬರ್ 2015, 19:32 IST

ಮಂಗಳೂರು: ಸಂಶೋಧಕ ಡಾ.ಎಂ.ಎಂ.ಕಲಬುರ್ಗಿ ಹತ್ಯೆ ಬಳಿಕ ‘ಫೇಸ್‌ಬುಕ್‌’ ಮೂಲಕ ಹಿಂಸೆಗೆ ಪ್ರಚೋದನೆ ನೀಡುವಂತೆ ಮತ್ತು ಹಿಂದೂ ಧರ್ಮದ ವಿರುದ್ಧ ಮಾತನಾಡುವವರ ಹತ್ಯೆಯ ಬೆದರಿಕೆ ಒಡ್ಡಿದ ಆರೋಪದ ಮೇಲೆ ರಾಮಸೇನೆ ಅಧ್ಯಕ್ಷ ಪ್ರಸಾದ್‌ ಅತ್ತಾವರನನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ.

ಆರೋಪಿಯು ತನ್ನ ಫೇಸ್‌ಬುಕ್‌ ಖಾತೆ ಮೂಲಕ ಪ್ರಸಾರ ಮಾಡಿದ್ದ ಸಂದೇಶವನ್ನು ಗಮನಿಸಿದ್ದ ಬಂದರು ಠಾಣೆ ಪೊಲೀಸರು, ಸ್ವಯಂಪ್ರೇರಿತ ಮೊಕದ್ದಮೆ ದಾಖಲಿಸಿಕೊಂಡಿದ್ದರು.

ಮಂಗಳೂರು ನಗರ ಸಿಸಿಬಿ ಪೊಲೀಸರು ಗುರುವಾರ ಆರೋಪಿಯನ್ನು ಪತ್ತೆಮಾಡಿ ವಶಕ್ಕೆ ಪಡೆದು, ಬಂದರು ಪೊಲೀಸರ ವಶಕ್ಕೆ ಒಪ್ಪಿಸಿದರು.

ಫೇಸ್‌ಬುಕ್‌ ಸಂದೇಶ ಕುರಿತು ಕೆಲಕಾಲ ವಿಚಾರಣೆ ನಡೆಸಿದ ಬಂದರು ಪೊಲೀಸರು ಆರೋಪಿಯನ್ನು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.