ADVERTISEMENT

ರಾಯಚೂರಿನಲ್ಲಿ ಐಐಟಿ ಸ್ಥಾಪನೆಗೆ ಮನವಿ

​ಪ್ರಜಾವಾಣಿ ವಾರ್ತೆ
Published 1 ಏಪ್ರಿಲ್ 2015, 10:48 IST
Last Updated 1 ಏಪ್ರಿಲ್ 2015, 10:48 IST

ಬೆಂಗಳೂರು: ಕಾಂಗ್ರೆಸ್‌ ಸಂಸದೀಯ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಉತ್ತರ ಕರ್ನಾಟಕದ ಆರು ಜಿಲ್ಲೆಗಳ ಶಾಸಕರು, ಸಂಸದರ ನಿಯೋಗವೊಂದು ಬುಧವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ರಾಯಚೂರಿನಲ್ಲಿ ಐಐಟಿ ಸ್ಥಾಪಿಸುವಂತೆ ಮನವಿ ಸಲ್ಲಿಸಿತು. ‌

ಹೈದರಾಬಾದ್‌  ಕರ್ನಾಟಕ ಭಾಗದ ಅಭಿವೃದ್ಧಿ ಬಗ್ಗೆಯೂ ಈ ನಿಯೋಗ ಮುಖ್ಯಮಂತ್ರಿಗಳ ಜತೆ ಚರ್ಚೆ ನಡೆಸಿತು ಎಂದು ಮೂಲಗಳು ತಿಳಿಸಿವೆ. 

ಕೇಂದ್ರ ಸರ್ಕಾರ ಈ ಬಾರಿಯ ಬಜೆಟ್‌ನಲ್ಲಿ ಕರ್ನಾಟಕಕ್ಕೆ ‘ಐಐಟಿ’ ಕೊಡುಗೆ ನೀಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.