ADVERTISEMENT

‘ರೈತರ ಆತ್ಮಹತ್ಯೆ ಪರಿಹಾರ ನೀಡದ ಕೇಂದ್ರ’

​ಪ್ರಜಾವಾಣಿ ವಾರ್ತೆ
Published 23 ಏಪ್ರಿಲ್ 2017, 20:22 IST
Last Updated 23 ಏಪ್ರಿಲ್ 2017, 20:22 IST

ಹಿರಿಯೂರು: ದೇಶದಲ್ಲಿ ಸಾಲದಿಂದ 12,000 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದು, ಮೋದಿ ನೇತೃತ್ವದ ಕೇಂದ್ರ ಸರ್ಕಾರ ನಯಾ ಪೈಸೆ ಪರಿಹಾರ ನೀಡದೆ ವಂಚಿಸಿದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಆರೋಪಿಸಿದರು.

ನಗರದಲ್ಲಿರುವ ಶಾಸಕ ಡಿ. ಸುಧಾಕರ್ ಕಚೇರಿ ಮುಂಭಾಗದಲ್ಲಿ ಆಯೋಜಿಸಿದ್ದ ಕಾಂಗ್ರೆಸ್ ಕಾರ್ಯಕರ್ತರು, ಜನಪ್ರತಿನಿಧಿಗಳ ಸಭೆಯಲ್ಲಿ ಅವರು ಮಾತನಾಡಿದರು. ರಾಜ್ಯದಲ್ಲಿ 1,000ಕ್ಕೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರೈತರ ಕುಟುಂಬಗಳಿಗೆ ರಾಜ್ಯ ಸರ್ಕಾರ ತಲಾ ₹ 5 ಲಕ್ಷ  ಪರಿಹಾರ ವಿತರಿಸಿದೆ. ಮೋದಿ ಅವರ ಭಾಷಣಗಳಲ್ಲಿ ರೈತರ ಬವಣೆಗಳ ಒಂದು ಮಾತೂ ಇಲ್ಲದಿರುವುದು ಬೇಸರ ತಂದಿದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT