ADVERTISEMENT

ಲಿಂಗಾಯತ ಧರ್ಮ ಅಗತ್ಯವಿಲ್ಲ: ಯಡಿಯೂರಪ್ಪ

​ಪ್ರಜಾವಾಣಿ ವಾರ್ತೆ
Published 23 ಜುಲೈ 2017, 6:08 IST
Last Updated 23 ಜುಲೈ 2017, 6:08 IST

ಶಿವಮೊಗ್ಗ: ವೀರಶೈವ–ಲಿಂಗಾಯತ ಹಿಂದೂ ಧರ್ಮದ ಒಂದು ಭಾಗ. ಈ ಸಮುದಾಯಕ್ಕೆ ಸ್ವತಂತ್ರ ಧರ್ಮದ ಸ್ಥಾನಮಾನದ ಅಗತ್ಯವಿಲ್ಲ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಪ್ರತಿಪಾದಿಸಿದರು. ತಮ್ಮಡಿಹಳ್ಳಿಯಲ್ಲಿ ಶನಿವಾರ ಸುದ್ದಿಗಾರರ ಜತೆ ಮಾತನಾಡಿದರು.

ಅಖಿಲ ಭಾರತ ವೀರಶೈವ ಮಹಾಸಭಾದ ಕೆಲವರು ವೀರಶೈವ, ಲಿಂಗಾಯತ ಬೇರೆ ಬೇರೆ ಎಂದು ವ್ಯಾಖ್ಯಾನಿಸುತ್ತಾರೆ. ಅದಕ್ಕೆ ಮುಖ್ಯಮಂತ್ರಿ ಕುಮ್ಮಕ್ಕು ನೀಡುತ್ತಿದ್ದಾರೆ ಎಂದು ಕಿಡಿಕಾರಿದರು.

ವೀರಶೈವ–ಲಿಂಗಾಯತ ಎಂದಿಗೂ ಹಿಂದೂ ಧರ್ಮದಲ್ಲೇ ಇರಬೇಕು. ಇಂತಹ ವಿಚಾರಗಳಲ್ಲಿ ರಾಜಕೀಯ ಬೆರೆಸಬಾರದು. ಈ ವಿಚಾರದಲ್ಲಿ ಸಿದ್ದರಾಮಯ್ಯ ಒಡೆದು ಆಳುವ ನೀತಿ ಅನುಸರಿಸುತ್ತಿದ್ದಾರೆ ಎಂದು ದೂರಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.